ವಾಹನದಲ್ಲಿ ಸಂಚರಿಸುತ್ತಿದ್ದಾಗಲೇ ವಾಹನ ಸ್ಪೋಟ : ಅಪಘಾತವಾಗಿ ಮಹಿಳೆ ಸಾವು


ಕಾನ್ಸುರ: ವಾಹನ ಚಾಲನೆ ಮಾಡುತ್ತಿರುವ ವೇಳೆ ಮೊಬೈಲ್‌ ಸ್ಫೋಟಗೊಂಡ ಪರಿಣಾಮ ಆದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಉತ್ತರಪ್ರದೇಶದ ಫರೂಕಾಬಾದ್ ಜಿಲ್ಲೆಯ ನೆಹರಾರಿಯಾ ಗ್ರಾಮದ ನಿವಾಸಿ ಪೂಜಾ (28) ಮೃತಪಟ್ಟವರು.

ಪೂಜಾ ಕೆಲಸದ ನಿಮಿತ್ತ ಮುಂಬೈಗೆ ತೆರಳಬೇಕಿದ್ದ ಕಾರಣ ಅವರು ವೇಗವಾಗಿ ವಾಹನ ಚಲಾಯಿಸಿಕೊಂಡು ರೈಲ್ವೆ ಸ್ಟೇಷನ್‌ನತ್ತ ತೆರಳುತ್ತಿದ್ದರು. ವಾಹನ ಚಲಾಯಿಸುವಾಗ ಅವರು ಹೆಲ್ಮಟ್ ಧರಿಸಿರಲಿಲ್ಲ. ಈ ವೇಳೆ ಮೊಬೈಲ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಜಾಗರೂಕತೆಯಿಂದ ವಾಹನ ಚಲಾಯಿಸಿರುವುದರಿಂದಲೇ ಈ ದುರ್ಘಟನೆ ಸಂಭವಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu