ಮಂಗಳೂರು: ಕಾಂಗ್ರೆಸ್ ಗೆ ಕೈಕೊಟ್ಟು ಕಮಲ ಮುಡಿದ ಮಾಜಿ ಮೇಯರ್ ಕವಿತಾ ಸನಿಲ್
Saturday, April 20, 2024
ಮಂಗಳೂರು: ಸಿಎಂ ಸಿದ್ದರಾಮಯ್ಯ ಆಪ್ತೆ, ಮಾಜಿ ಮೇಯರ್ ಕವಿತಾ ಸನಿಲ್ ಅವರು ಶನಿವಾರ ಬಂಟ್ವಾಳದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಬಂಟ್ವಾಳದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಉಪಸ್ಥಿತಿಯಲ್ಲಿ ಕವಿತಾ ಸನಿಲ್ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ವಿಜಯೇಂದ್ರ ಅವರು ಕೇಸರಿ ಶಾಲು ಹಾಕಿ ಪಕ್ಷದ ಬಾವುಟವನ್ನು ನೀಡಿ ಕವಿತಾ ಸನಿಲ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಮಂಗಳೂರು ಮನಪಾ ಮೇಯರ್ ಆಗಿ ಜನಪ್ರಿಯತೆ ಗಳಿಸಿದ್ದ ಕವಿತಾ ಸನಿಲ್ ಅವರು, ಅಂತರಾಷ್ಟ್ರೀಯ ಮಟ್ಟದ ಖ್ಯಾತ ಕರಾಟೆ ಪಟುವಾಗಿದ್ದಾರೆ. ಈ ಹಿಂದೆ ಮಂಗಳೂರಿನಲ್ಲಿ ನಡೆದ ಕರಾಟೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯರ ಹೊಟ್ಟೆಗೊಂದು ಗುದ್ದು ಕೊಟ್ಟು ಕವಿತಾ ಸನಿಲ್ ಸುದ್ದಿಯಾಗಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ, ತಾನು ಸಿದ್ಧಾಂತವನ್ನು ಒಪ್ಪಿಕೊಂಡು ಇಂದು ಬಿಜೆಪಿ ಸೇರ್ಪಡೆಗೊಂಡಿದ್ದೇನೆ. ಇಂದು ನಾನು ಬಿಜೆಪಿ ಸೇರ್ಪಡೆ ಆಗುತ್ತೇನೆಂದು ತಾನು ಯಾರಲ್ಲೂ ಹೇಳಿಲ್ಲ. ಆದರೆ ನನ್ನ ರಾಜಕೀಯ ಗುರು, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರಿಗೆ ತಿಳಿಸಿ ಅವರ ಆಶೀರ್ವಾದ ಪಡೆದು ಬಂದಿದ್ದೇನೆ. ಅವರು ತನ್ನ ಭವಿಷ್ಯ ಉಜ್ವಲವಾಗಲಿ ಎಂದು ಆಶೀರ್ವದಿಸಿ ಹರಸಿದ್ದಾರೆ ಎಂದು ಕವಿತಾ ಸನಿಲ್ ಹೇಳಿದರು.