-->
1000938341
ಎಂಟು ತಿಂಗಳ ಹಿಂದಷ್ಟೇ ವಿವಾಹ: ಮಗು ಮಾಡಿಕೊಳ್ಳವು ವಿಚಾರಕ್ಕೆ ನಡೆದ ಗಲಾಟೆ ಪತ್ನಿಯ ಕೊಲೆಯಲ್ಲಿ ಅಂತ್ಯ

ಎಂಟು ತಿಂಗಳ ಹಿಂದಷ್ಟೇ ವಿವಾಹ: ಮಗು ಮಾಡಿಕೊಳ್ಳವು ವಿಚಾರಕ್ಕೆ ನಡೆದ ಗಲಾಟೆ ಪತ್ನಿಯ ಕೊಲೆಯಲ್ಲಿ ಅಂತ್ಯ


ಬೆಂಗಳೂರು: ಮಗು ಮಾಡಿಕೊಳ್ಳುವ ವಿಚಾರಕ್ಕೆ ಮನಸ್ತಾಪಗೊಂಡು ಯುವಕನೊಬ್ಬ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ಘಟನೆ ನಗರದ ಹೆಚ್‌ಎಎಲ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗಿರಿಜಾ ಮೃತಪಟ್ಟ ಮಹಿಳೆ. ಆಕೆಯ ಪತಿ ನವೀನ್ ಹತ್ಯೆಗೈದ ಆರೋಪಿ. ಎಂಟು ತಿಂಗಳ ಹಿಂದಷ್ಟೇ ಗಿರಿಜಾ - ನವೀನ್ ವಿವಾಹ ಅದ್ದೂರಿಯಾಗಿ ನಡೆದಿತ್ತು. ಆದರೆ ಪತಿ - ಪತ್ನಿಯ ನಡುವೆ ಮಗು ಮಾಡಿಕೊಳ್ಳುವ ವಿಚಾರಕ್ಕೆ ಜಗಳ ನಡೆದಿದೆ. ಇದೇ ಕಾರಣಕ್ಕೆ ಗಿರಿಜಾ ಮಲಗಿದ್ದ ವೇಳೆ ಆರೋಪಿ ನವೀನ್ ಆಕೆಯನ್ನು ಉಸಿರುಗಟ್ಟಿಸಿ ಹತ್ಯೆಗೈದಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಹೆಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article