-->
1000938341
ವರುಣನ ಆಗಮನ ನಿರೀಕ್ಷೆ

ವರುಣನ ಆಗಮನ ನಿರೀಕ್ಷೆ


ಬಿಸಿಲ ತಾಪದಿಂದ ಬೆಂದ ಕರ್ನಾಟಕದ ಜನತೆಗೆ ಮಳೆರಾಯ ತಂಪೆರೆಯಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ ರಾಜ್ಯದ 5ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಐದು ದಿನಗಳ  ಕಾಲ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಅಧಿಕ ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಉಳಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು,ಮಂಡ್ಯ, ಮೈಸೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.
ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಕೆ ಹಾಗೂ ಆರ್ದ್ರತೆ ಹೆಚ್ಚಾಗಲಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಳವಾಗಲಿದೆ.
ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿರಲಿದೆ, ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹಾಗೂ ಜಿಕೆವಿಕೆಯಲ್ಲಿ 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article