-->
1000938341
ಕರುನಾಡ ಜನರ ಮನಗೆದ್ದ ದ್ವಾರಕೀಶ್‌ ಇನ್ನಿಲ್ಲ

ಕರುನಾಡ ಜನರ ಮನಗೆದ್ದ ದ್ವಾರಕೀಶ್‌ ಇನ್ನಿಲ್ಲ


ಕರುನಾಡ ಕುಳ್ಳ ಎಂದು ಹೆಸರುವಾಸಿಯಾದ ಮನೋಜ್ಞ ನಟನೆಯ ಮೂಲಕ ಮನೆಮಾತಾಗಿದ್ದ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌  ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್‌ ಅವರು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮಂಗಳವಾರ  ನಿಧನರಾಗಿದ್ದಾರೆ. ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ದ್ವಾರಕೀಶ್‌ ಅವರ ಅಗಲಿಕೆಗೆ ಸ್ಯಾಂಡಲ್‌ವುಡ್‌ ನಟರು ಸೇರಿ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. 1942ರ ಆಗಸ್ಟ್‌ 19ರಂದು ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಜನಸಿದ ಅವರು ನಟನೆಯ ಮೂಲಕವೇ ಮನೆಮಾತಾಗಿದ್ದರು. ಡಾ.ರಾಜಕುಮಾರ್‌ ಸೇರಿ ಹಲವು ಗಣ್ಯರೊಂದಿಗೆ ನಟಿಸಿ ಅವರು ಸೈ ಎನಿಸಿಕೊಂಡಿದ್ದರು.
- ಸಿನಿಜೀವನ
1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದರು. ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಸಿನಿಮಾಗಳಲ್ಲಿ ತೆರೆಹಂಚಿಕೊಂಡಿದ್ದರು. 1966ರಲ್ಲಿ ದ್ವಾರಕೀಶ್ ಅವರು ಮಮತೆಯ ಬಂಧನ ಸಿನಿಮಾವನ್ನು ಇನ್ನಿಬ್ಬರು ನಿರ್ಮಾಪಕರ ಜೊತೆ ಸೇರಿ ತುಂಬಾ ಪಿಕ್ಚರ್ಸ್ ಬ್ಯಾನರ್‌ನಲ್ಲಿ ನಿರ್ಮಿಸಿದರು. ೧೯೬೯ರಲ್ಲಿ ಡಾ.ರಾಜ್‌ಕುಮಾರ್ ಅಭಿನಯದ ಮೇಯ‌ರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾದರು. ಈ ಚಿತ್ರ ಬಾಕ್ಸಾಫೀಸ್‌ನಲ್ಲಿ ಸೂಪರ್ ಹಿಟ್ ಆಗಿತ್ತು. ಈ ಸಿನಿಮಾದ ಬಳಿಕ ಹಲವು ಸಿನಿಮಾಗಳನ್ನು ನಿರ್ಮಿಸಿ, ಅದರಲ್ಲಿ ಯಶಸ್ಸು ಗಳಿಸಿದರು. ದ್ವಾರಕೀಶ್ ಈವರೆಗೂ 40ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿದ್ದಾರೆ. ನಿರ್ಮಾಪಕರಾಗಿ ಹಲವು ಕಲಾವಿದರನ್ನು ಚಿತ್ರರಂಗ ಪರಿಚಯಸಿದ್ದಾರೆ.
- ನಿರ್ದೇಶನ
1985ರಲ್ಲಿ ಸಿನಿಮಾ ನಿರ್ದೇಶನಕ್ಕಿಳಿದ ದ್ವಾರಕೀಶ್, ಮೊದಲ ಬಾರಿ ನೀ ಬರೆದ ಕಾದಂಬರಿ ಎಂಬ ಚಿತ್ರವನ್ನು ನಿರ್ದೇಶಿಸಿದರು. ಈ ಸಿನಿಮಾ ಸಾಕಷ್ಟು ಯಶಸ್ಸು ಗಳಿಸಿತು. ನಂತರ ಡಾನ್ಸ್ ರಾಜ ಡಾನ್ಸ, ಶ್ರುತಿ, ಶ್ರುತಿ ಹಾಕಿದ ಹೆಜ್ಜೆ, ರಾಯರು ಬಂದರು ಮಾವನ ಮನೆಗೆ ಸೇರಿದಂತೆ 15ಕ್ಕೂ ಹೆಚ್ಚು ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ. ನಿರ್ಮಾಣ ಸಂಸ್ಥೆ ಡಾ.ರಾಜ್‌ಕುಮಾ‌ರ್, ವಿಷ್ಣುವರ್ಧನ್‌ರಂತಹ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿದ ಹೆಗ್ಗಳಿಕೆ ಗಳಿಸಿರುವ ದ್ವಾರಕೀಶ್‌ 'ದ್ವಾರಕೀಶ್ ಚಿತ್ರ' ನಿರ್ಮಾಣ ಸಂಸ್ಥೆ ಮೂಲಕ ಈಗಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇವರು ಕನ್ನಡ ಮಾತ್ರವಲ್ಲದೇ, ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಿಸಿದ್ದಾರೆ.
ದೇವರು ದ್ವಾರಕೀಶ್ ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ 

Ads on article

Advertise in articles 1

advertising articles 2

Advertise under the article