ಹತ್ತನೇ ತರಗತಿ ಪರೀಕ್ಷೆಯ ಫಲಿತಾಂಶ ಮೇ ಮೊದಲ ವಾರ ಪ್ರಕಟವಾಗುವ ಸಾಧ್ಯತೆ ಎಂದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು .
ಫಲಿತಾಂಶ ಪ್ರಕಟಿಸುವುದು ಮಾತ್ರವೇ ಬಾಕಿ ಉಳಿದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಬಳಿಕ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ನಡೆಯುತ್ತಿದೆ. ಇನ್ನೂ ಕೆಲವೇ ಕೆಲವು ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಬಾಕಿ ಉಳಿದಿದೆ.
ಬಾಕಿ ಇರುವ ಕೆಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ಮುಗಿದ ಬಳಿಕ ಶೀಘ್ರದಲ್ಲೇ ಫಲಿತಾಂಶ ಘೋಷಣೆಯ ದಿನಾಂಕವನ್ನು ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.