ಮೈಸೂರು: ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಆವರುಹೃದಯಘಾತದಿಂದ ನಿಧನರಾಗಿದ್ದಾರೆ. ಅವರ ಅಂತಿಮ ಸಂಸ್ಕಾರ ನಾಳೆ ಅವರ ತವರು ಕ್ಷೇತ್ರದಲ್ಲಿ ನಡೆಯಲಿದೆ. ಹೀಗಾಗಿ ಅವರ ನಿಧನ ಗೌರವಾರ್ಥವಾಗಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಎಲ್ಲ ಶಾಲಾ, ಕಾಲೇಜುಗಳಿಗೆ ನಾಳೆ (ಎಪ್ರಿಲ್ 30) ರಜೆ ಘೋಷಿಸಲಾಗಿದೆ.
ಜೊತೆಗೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಿಗೂ ರಜೆ ಘೋಷಿಸಲಾಗಿದೆ. ಸರ್ಕಾರಿ ಶಾಲೆ, ಕಾಲೇಜುಗಳಿಗೂ ಹಾಗೂ ಅನುದಾನ ಪಡೆಯುವಂತಹ ಎಲ್ಲಾ ವಿದ್ಯಾಸಂಸ್ಥೆಗಳಿಗೂ ನಾಳೆ ರಾಜ್ಯ ಸರ್ಕಾರದಿಂದ ರಜೆ ಘೋಷಣೆ ಮಾಡಲಾಗಿದೆ.