ಗಗನಕ್ಕೆ ಏರಿದ ಚಿನ್ನದ ಬೆಲೆ

ದಿನದಿಂದ ದಿನಕ್ಕೆ ಏರಿಕೆ ಆಗುತ್ತಿರುವ   ಚಿನ್ನ ಹಾಗೂ ಬೆಳ್ಳಿಯ ಬೆಲೆ ಗುರುವಾರವೂ ಕೂಡ ಭರ್ಜರಿ ಏರಿಕೆ ಕಂಡಿದ್ದು, ಗ್ರಾಹಕರಿಗೆ ಶಾಕ್‌ ಕೊಟ್ಟಂತಾಗಿದೆ. ಬುಧವಾರದಂದು 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,730 ರುಪಾಯಿ ಆಗಿದ್ದು, ಇದೀಗ 72,110 ರುಪಾಯಿ ಆಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ ಸುಮಾರು 7 ರೂನಷ್ಟು ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,110 ರುಪಾಯಿ ಆಗಿದ್ದು, 100 ಗ್ರಾಮ್ ಬೆಳ್ಳಿ ಬೆಲೆ 8,550 ರುಪಾಯಿ ಇದೆ. ಹಾಗಾದರೇ ಇಂದು (ಏಪ್ರಿಲ್ 11) ಬೆಂಗಳೂರು ನಗರ ಸೇರಿದಂತೆ ವಿವಿಧ ನಗರದಲ್ಲಿ ಚಿನ್ನ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ 

ಚಿನ್ನ ಮತ್ತು ಬೆಳ್ಳಿ ಬೆಲೆ ದರ ಎಷ್ಟು ಗೊತ್ತಾ?
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,100 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,110 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 855 ರೂ