-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಂಗಳೂರಿನಲ್ಲಿ ಮುಂಜಾನೆ ಹೊತ್ತು ಉರಿದ ಟಯರ್ ಅಂಗಡಿ

ಬೆಂಗಳೂರಿನಲ್ಲಿ ಮುಂಜಾನೆ ಹೊತ್ತು ಉರಿದ ಟಯರ್ ಅಂಗಡಿ


ಬೆಂಗಳೂರು: ಚಾಮರಾಜಪೇಟೆಯ ಟಿಆರ್ ಮೀಲ್ ಬಳಿ ಟಯರ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು  ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡವು. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗಲಿರುವ ಶಂಕೆ .
ಮುಂಜಾನೆ 4:30 ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. 5:30 ಸಮಯಕ್ಕೆ ಪೊಲೀಸರು ಮನೆಯಿಂದ ಎಲ್ಲರೂ ಹೊರಗಡೆ ಬರುವಂತೆ ಅನೌನ್ಸ್ ಮಾಡಿದರು. ಅಕ್ಕಪಕ್ಕದ 20ಕ್ಕೂ ಹೆಚ್ಚು ಮನೆಗಳ ಜನರನ್ನು ಪೊಲೀಸರು ಖಾಲಿ ಮಾಡಿಸಿದ್ದಾರೆ  ಎಂದು ತಿಳಿದಿದೆ. ಬೆಂಕಿ ತಗಲಿರೋ ಕಟ್ಟಡದಲ್ಲಿ 8 ಟಯರ್ ಅಂಗಡಿಗಳು ಇದ್ದು, ಎಲ್ಲ ಅಂಗಡಿಗಳು ಕೂಡ ಹೊತ್ತಿ ಉರಿಯುತ್ತಿವೆ.
3 ಗಂಟೆಯಿಂದ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದರೂ ಕಂಟ್ರೋಲ್ ರೂಂನಲ್ಲಿ ಪಬ್ಲಿಕ್ ಕಾಲ್ ಪಿಕ್ ಮಾಡಿಲ್ಲ. ನಾಲ್ಕೂವರೆ ಸುಮಾರಿಗೆ ಬಂದು ಬೆಂಕಿ ನಂದಿಸೋ ಕೆಲಸ ಮಾಡಲಾಗುತ್ತಿದೆ. ಒಂದೂವರೆ ಗಂಟೆ ತಡವಾಗಿ ಅಗ್ನಿಶಾಮಕ ವಾಹನಗಳು ಬಂದ ಕಾರಣ ಗೋಡೌನ್ ಸಂಪೂರ್ಣವಾಗಿ ಬೆಂಕಿ ಅವರಿಸಿಕೊಂಡಿದೆ ಎನ್ನಲಾಗಿದೆ.
ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ.

Ads on article

Advertise in articles 1

advertising articles 2

Advertise under the article

ಸುರ