-->
1000938341
ಇನ್ನು ಹೆಚ್ಚಾಗಲಿದೆ ಬಿಸಿಲಿನ ತಾಪ ಎಚ್ಚರಿಕೆ

ಇನ್ನು ಹೆಚ್ಚಾಗಲಿದೆ ಬಿಸಿಲಿನ ತಾಪ ಎಚ್ಚರಿಕೆಕರಾವಳಿಯಲ್ಲಿ ಬೇಸಿಗೆಯ ಪರಿಣಾಮ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಗುತ್ತಿದೆ  ಎ.30 ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ ಉಂಟು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ತಿಳಿಸಿದೆ .
ಭಾರತೀಯ ಹವಾಮಾನ ಇಲಾಖೆ ಮುಂದಿನ ಐದು ದಿನಗಳ ಕಾಲ ದ.ಕ. ಉಡುಪಿ ಸಹಿತ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ಅಲೆ ಹೆಚ್ಚಾಗಲಿದೆ ಎಂದು ವರದಿ ನೀಡಿದೆ . ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಕೆ ನೀಡಿದೆ .
ಏನೆಂದು ಸೂಚನೆ ನೀಡಿದೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಇಲಾಖೆ :
ಬಿಸಿಗಾಳಿಯಿಂದಾಗಿ ಉಂಟಾಗುವ ಸನ್ ಸ್ಟೋಕ್ ಮತ್ತಿತರ ಸಮಸ್ಯೆಗಳಿಂದ ದೂರ ಆಗಲು ಮಧ್ಯಾಹ್ನ 1 ರಿಂದ ಅಪರಾಹ್ನ 3 ರವರೆಗೆ ಹೊರಗೆ ಹೋಗಬಾರದು,
ತೆಳುವಾದ. ಹಗುರವಾದ ಬಟ್ಟೆಗಳನ್ನು ಧರಿಸಬೇಕು,
ನಿರ್ಜಲೀಕರಣವಾಗದಂತೆ ತಡೆಯಲು ಆಗಾಗ ನೀರು ಕುಡಿಯುತ್ತಿರಬೇಕು ಎಂದು ಸೂಚನೆ ನೀಡಿದೆ.

ದ.ಕ ಜಿಲ್ಲೆಯ ಗರಿಷ್ಠ ತಾಪಮಾನ ಸದ್ಯಕ್ಕೆ ಸ್ಥಿರವಾಗಿದೆ. ಗುರುವಾರ ಈ ಪ್ರಮಾಣ 34 ಡಿಗ್ರಿ ಸೆಲ್ಸಿಯಸ್ ಇದ್ದರೆ, ಶುಕ್ರವಾರ ಗರಿಷ್ಠ 34.1 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಜಿಲ್ಲೆಯ ಬಹುತೇಕ ಗಡಿ ಭಾಗಗಳಲ್ಲಿ ಸಂಜೆಯಿಂದ ಮೋಡದ ವಾತಾವರಣದ ಮುನ್ಸೂಚನೆ ಇದೆ ಎಂದು ರಾಷ್ಟ್ರೀಯ ಹವಾಮಾನ ಮನ್ಸೂಚನಾ ಕೇಂದ್ರ ಮಾಹಿತಿ ನೀಡಿದೆ

Ads on article

Advertise in articles 1

advertising articles 2

Advertise under the article