-->

ಯಕ್ಷಗಾನದ ಪ್ರಸಿದ್ಧ  ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಯಕ್ಷಗಾನದ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಬಡಗುತಿಟ್ಟಿನ ಪ್ರಸಿದ್ಧ ಭಾಗವತರದ  ಸುಬ್ರಹ್ಮಣ್ಯ ಧಾರೇಶ್ವರ ಅವರು ಇಂದು ಮರಣ ಹೊಂದಿದ್ದಾರೆ.
ಹಂಗಾರಕಟ್ಟೆ ಯಕ್ಷಗಾನ ಕೇಂದ್ರದಲ್ಲಿ ಎಂ.ನಾರ್ಣಪ್ಪ ಉಪೂರರ ಶಿಷ್ಯರಾದ ಇವರು, ಕಾಳಿಂಗ ನಾವಡರ ಒಡನಾಡಿಯಾಗಿ ರಂಗ ಪ್ರವೇಶಿಸಿ, ವಿವಿಧ ಮೇಳಗಳಲ್ಲಿ ಮುಖ್ಯವಾಗಿ ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿ ಒಟ್ಟೂ ಸುಮಾರು ನಾಲ್ಕುವರೆ ದಶಕಗಳ ಕಲಾ ಸೇವೆ ಗೈದಿದ್ದರು. ತಮ್ಮ ಸುಮಧುರ ಕಂಠ, ಪರಂಪರೆಯ ಶೈಲಿ, ರಂಗ ತಂತ್ರದಿಂದ ಹಲವು ಪೌರಾಣಿಕ ಮತ್ತು ಹೊಸ ಪ್ರಸಂಗಗಳಿಗೆ ಜೀವ ತುಂಬಿದ್ದರು. ಯಕ್ಷಗಾನ ಕಲಾರಂಗ ಅವರಿಗೆ ನಾರ್ಣಪ್ಪ ಉಪೂರರ ಪ್ರಶಸ್ತಿ ನೀಡಿ ಗೌರವಿಸಿತ್ತು, ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು .ಇಂದು ಸಂಜೆ ಕಿರಿಮಂಜೇಶ್ವರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಕರ್ನಾಟಕ ಯಕ್ಷಗಾನ ಅಕಾಡೆಮಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಡಗುತಿಟ್ಟಿನ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಅವರ ಹಠಾತ್ ನಿಧನ ಯಕ್ಷಗಾನ ರಂಗಕ್ಕೆ ತುಂಬಲಾರದ ನಷ್ಟ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
ಯಕ್ಷಗಾನ ರಂಗದಲ್ಲಿ ಹೊಸ ಪ್ರಯೋಗಗಳ ಮೂಲಕ ಯಕ್ಷ ಪ್ರೇಮಿಗಳ ಮನದಂಗಳದಲ್ಲಿ ರಾರಾಜಿಸಿದ್ದ ಧಾರೇಶ್ವರ ಅವರು, ಕಾಳಿಂಗ ನಾವಡರ ಆಗಲುವಿಕೆಯ ಬಳಿಕ ಉಂಟಾಗಿದ್ದ ನಿರ್ವಾತವನ್ನು ತುಂಬಬಲ್ಲರು ಎನ್ನುವಷ್ಟರ ಮಟ್ಟಿಗೆ ಬೆಳೆದಿರುವುದು ಇತಿಹಾಸ, ಇಂತಹ ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಅವರ ಸಾವು  ಕುಟುಂಬಕ್ಕೆ ಅಭಿಮಾನಿಗಳಿಗೆ ನೋವನ್ನು ನೀಡಿದೆ . ದೇವರು ಇವರ ಸಾವಿನ ನೋವನ್ನು ತಡೆಯುವ ಶಕ್ತಿ ನೀಡಲಿ 

Ads on article

Advertise in articles 1

advertising articles 2

Advertise under the article