ನಾಳೆ ದ್ವಿತೀಯ ಪಿಯುಸಿ ಫಲಿತಾಂಶ


ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಏ.10ರಂದು 11 ಗಂಟೆಗೆ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು ಮಾರ್ಚ್ 2024ರ ದ್ವಿತೀಯ, ಪಿಯುಸಿ ಪರೀಕ್ಷೆ- ನ್ನು ದಿನಾಂಕ:01/03/2024 ರಿಂದ 22/03/2024 ರವರೆಗೆ ನಡೆಸಲಾಯಿತು.ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 10/04/2024 ರಂದು ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ಹೇಳಿದ್ದಾರೆ.
ಫಲಿತಾಂಶ ನೋಡೋದು ಹೇಗೆ?
ಏಪ್ರಿಲ್ 10ರ ಬೆಳಿಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಆ ಬಳಿಕ ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in ದಿನಾಂಕ:10/04/2024ರ ಬೆಳಿಗ್ಗೆ 11:00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.
ಬೆಸ್ಟ್ ಆಫ್ ಲಕ್ ವಿದ್ಯಾರ್ಥಿಗಳೇ!
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಬೆಸ್ಟ್ ಆಫ್ ಲಕ್. ಫಲಿತಾಂಶ ಸಿಹಿ ಕಹಿ ಏನೇ ಇರಲಿ ಸಮಾನವಾಗಿ ಸ್ವೀಕರಿಸಿ ಸೋಲೆ ಗೆಲುವಿನ ಮೆಟ್ಟಿಲು.

BREAKING NEWS
Loading latest news...
Join our WhatsApp Channel Powered By : Online Pudu