-->
ಬೆಂಗಳೂರು: ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ - ಐವರು ಕಾಮುಕರು ಅರೆಸ್ಟ್

ಬೆಂಗಳೂರು: ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ - ಐವರು ಕಾಮುಕರು ಅರೆಸ್ಟ್


ಬೆಂಗಳೂರು: ಯುವತಿಯೊಬ್ಬಳನ್ನು ಕಾರಿನಲ್ಲಿ ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರಗೈದಿರುವ ಆರೋಪದಡಿ ಇಲ್ಲಿನ ಹೈಗೌಂಡ್ ಠಾಣೆಯ ಪೊಲೀಸರು ಐವರು ಕಾಮುಕರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಶೇಷಾದ್ರಿಪುರಂ ನಿವಾಸಿ 23ರ ಯುವತಿಯನ್ನು ಕಳೆದ ಮೂರು ದಿನಗಳ ಹಿಂದೆ ಅಪಹರಿಸಿದ ಆರೋಪಿಗಳು, ಬಳಿಕ ಆಕೆಯನ್ನು ಬೆಂಗಳೂರು ಹೊರವಲಯಕ್ಕೆ ಕರೆದೊಯ್ದು ಅತ್ಯಾಚಾರ ವೆಸಗಿದ್ದಾರೆ ಎಂದು ತಿಳಿದುಬಂದಿದೆ.

ಕಾಮುಕರ ಕೈಯಿಂದ ತಪ್ಪಿಸಿಕೊಂಡು ಬಂದ ಯುವತಿ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ತಕ್ಷಣ ಕುಟುಂಬ ಸದಸ್ಯರು ಹೈಗೌಂಡ್‌ ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದ್ದಾರೆ. ಪ್ರಕರಣದ ಗಂಭೀರತೆ ಅರಿತ ಪೊಲೀಸರು ತಕ್ಷಣವೇ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಘಟನೆ ನಡೆದ ಸ್ಥಳವನ್ನು ಪರಿಶೀಲಿಸಿ ಸ್ಥಳೀಯ ಸಿಸಿ ಕ್ಯಾಮೆರಾವನ್ನು ವಶಪಡಿಸಿಕೊಂಡು ಐವರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿರುವುದಾಗಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article