ಬೆಂಗಳೂರು: ಅಕ್ರಮವಾಗಿ ಬಾಲಕಿಯ ದತ್ತು ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರಿಗೆ ಜಾಮೀನು ಮಂಜೂರು ಆಗಿದೆ.
ಗುರುವಾರ ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಅವರು ಇಂದು ಅಥವಾ ನಾಳೆ ಸೋನು ಶ್ರೀನಿವಾಸ್ ಗೌಡ ಜೈಲಿನಿಂದ ಹೊರಬರುವ ಸಾಧ್ಯತೆಯಿದೆ ಎನ್ನಲಾಗಿದೆ.
ಸೋನು ಗೌಡ ಇತ್ತೀಚೆಗೆ ಪುಟ್ಟ ಬಾಲಕಿಯನ್ನು ದತ್ತು ಪಡೆದಿರುವುದಾಗಿ ಹೇಳಿಕೊಂಡಿದ್ದರು. ಆದರೆ, ಕಾನೂನು ಪ್ರಕಾರ ದತ್ತು ಪಡೆದಿರಲಿಲ್ಲ ಎಂಬ ಕಾರಣಕ್ಕೆ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಲ್ಲದೇ, ಸೋನು ಗೌಡರನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೇ, ಸೋನು ಗೌಡರನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಶ್ರೀನಿವಾಸ್ ಗೌಡ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿತ್ತು.