ಕೆರೆ ಮೀನು ತಿಂದು ಇಬ್ಬರ ಸಾವು 15ಕ್ಕೂ ಅಧಿಕ ಮಂದಿ ಅಸ್ವಸ್ಥ


ಹಾಸನ: ಕೆರೆ ಮೀನು ತಿಂದು ಇಬ್ಬರು ಮೃತಪಟ್ಟು 15ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಬಸವಹಳ್ಳಿ ಗ್ರಾಮದಲ್ಲಿ ನಡೆದಿದೆ.

ರವಿಕುಮಾರ (46), ಪುಟ್ಟಮ್ಮ 50) ಮೃತಪಟ್ಟವರು.

ನೀರಿಲ್ಲದೆ ಬತ್ತಿ ಹೋಗಿದ್ದ ಬಸವನಹಳ್ಳಿ ಗ್ರಾಮದ ಕೆರೆಯಲ್ಲಿ ಕೆಸರು ತುಂಬಿತ್ತು. ಗ್ರಾಮಸ್ಥರು ಅದರಲ್ಲಿದ್ದ ಮೀನುಗಳನ್ನು ಹಿಡಿದು ಅಡುಗೆ ಮಾಡಿ ಊಟ ಮಾಡಿದ್ದಾರೆ. ಆ ಬಳಿಕ 15ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.

ಅಸ್ವಸ್ಥರನ್ನು ಅರಕಲಗೂಡು ಹಾಗೂ ಹಾಸನದ ಆಸ್ಪತ್ರೆಗೆ ದಾಖಲಿದ್ದು, ಗ್ರಾಮಕ್ಕೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಭೇಟಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
BREAKING NEWS
Loading latest news...
Join our WhatsApp Channel Powered By : Online Pudu