ಮಂಗಳೂರು: 19 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

 



ಮಂಗಳೂರು: ನಗರದ ವೆಲೆನ್ಸಿಯಾದ ಫೇಡ್ರೋಜ್ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ರಕ್ಷಿತ.ಎಸ್(19)  ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿದೆ.

 ಈಕೆ ಮೇ 23ರಂದು ಕಾಣೆಯಾಗಿದ್ದಾರೆ. ಕಂಕನಾಡಿಯ ಕೊಲಾಸೊ ಕಾಲೇಜಿನಲ್ಲಿ ಪ್ಯಾರಾಮೆಡಿಕಲ್ BSC ಮೊದಲನೇ ವರ್ಷದ ವಿದ್ಯಾರ್ಥಿನಿಯಾಗಿರುವ ರಕ್ಷಿತ ಅವರು ಮೇ 23ರಂದು ಬೆಳಗ್ಗೆ 8:30ಕ್ಕೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟವರು ಕಾಲೇಜಿಗೆ ಹೋಗದೆ ಮತ್ತು ಮನೆಗೂ ವಾಪಸ್ ಬಾರದೆ ನಾಪತ್ತೆಯಾಗಿರುವುದಾಗಿ ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BREAKING NEWS
Loading latest news...
Join our WhatsApp Channel Powered By : Online Pudu