-->
ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು  ಮೇ 4 ಕೊನೆಯ ದಿನಾಂಕ

ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನಾಂಕ

ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ. ಕರ್ನಾಟಕ ಕಂದಾಯ ಇಲಾಖೆಯಲ್ಲಿ ಒಟ್ಟು 1000 ಗ್ರಾಮ ಲೆಕ್ಕಿಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಅರ್ಜಿ ಸಲ್ಲಿಸಲು ಅವಕಾಶ ಉಂಟು ಮೊದಲು ಏಪ್ರಿಲ್ 3, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಈಗ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ. ಆ ಪ್ರಕಾರ, 04. 05.2024ಅಂದರೆ ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು

ಹುದ್ದೆಗಳ ವಿವರ
ಇಲಾಖೆ ಹೆಸರು : ಕರ್ನಾಟಕ ಕಂದಾಯ ಇಲಾಖೆ
ಹುದ್ದೆಗಳ ಸಂಖ್ಯೆ : 1000
ಹುದ್ದೆಗಳ ಹೆಸರು : ಗ್ರಾಮ ಲೆಕ್ಕಾಧಿಕಾರಿ (Village Accountant)
ಉದ್ಯೋಗ ಸ್ಥಳ : ಕರ್ನಾಟಕ

ಅಪ್ಲಿಕೇಶನ್ ಮೋಡ್ : ಆಸ್ಟೈನ್ ಮೋಡ್

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ದ್ವಿತೀಯ ಪಿಯುಸಿ, ಡಿಪ್ಲೊಮಾ, ITI ಪೂರ್ಣಗೊಳಿಸಿರಬೇಕು
ವಯೋಮಿತಿ:
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
2A, 2B, 3A, 3B ಅಭ್ಯರ್ಥಿಗಳು 03 ವರ್ಷಗಳು SC/ST ಅಭ್ಯರ್ಥಿಗಳು 05 ವರ್ಷಗಳು
ಅರ್ಜಿ ಶುಲ್ಕ:
2A, 2B, 3A, 3B ໙໘ 750/- SC/ST ಅಭ್ಯರ್ಥಿಗಳು 500/-

ಸಂಬಳದ ವಿವರ
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹21,400 ರಿಂದ 42,000/- ಸಂಬಳ ನೀಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?

ಹಂತ 1: kpsc.kar.nic.in ನಲ್ಲಿ KPSC ಯ ಅಧಿಕೃತ ಪೋರ್ಟಲ್‌ಗೆ ಭೇಟಿ ನೀಡಿ

ಹಂತ 2: ಮುಖಪುಟದಲ್ಲಿ ಗ್ರಾಮ ಲೆಕ್ಕಿಗರ ಅರ್ಜಿ ನಮೂನೆಯ ಲಿಂಕ್ ಅನ್ನು ಕ್ಲಿಕ್ ಮಾಡಿ

JOIN GROUP

ಹಂತ 3: ಈಗ, KPSC ಗ್ರಾಮ ಲೆಕ್ಕಿಗರ ನೇಮಕಾತಿಗಾಗಿ ನೋಂದಾಯಿಸಿ

ಹಂತ 4: ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ

ಹಂತ 5: ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ

ಹಂತ 6: ಭವಿಷ್ಯಕ್ಕಾಗಿ ಅರ್ಜಿ ನಮೂನೆಯ ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್‌ಔಟ್ ತೆಗೆದುಕೊಳ್ಳಿ

ಪ್ರಮುಖ ಲಿಂಕ್'ಗಳು:
ಅಧಿಕೃತ ಅಧಿಸೂಚನೆ: ಡೌನ್'ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅರ್ಜಿ ಸಲ್ಲಿಕೆ ದಿನಾಂಕ ವಿವರ: ಡೌನ್‌ಲೋಡ್
VOA ತಿದ್ದುಪಡಿ: ಡೌನ್'ಲೋಡ್

Ads on article

Advertise in articles 1

advertising articles 2

Advertise under the article