ಮದುವೆ ಸಮಾರಂಭದ ಐಸ್​​​​​​ ಕ್ರೀಂ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ - Ice Cream




ರಾಮನಗರ: ಮದುವೆ ಸಮಾರಂಭದಲ್ಲಿ ಐಸ್​ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚನ್ನಪಟ್ಟಣದಲ್ಲಿ ರವಿವಾರ ನಡೆದಿದೆ.

ಚನ್ನಪಟ್ಟಣ ನಗರದ ಸಾತನೂರು ಸರ್ಕಲ್ ಸಮೀಪ ವಿವಾಹ ಸಮಾರಂಭ ಏರ್ಪಾಡಾಗಿತ್ತು. ಊಟದ ನಂತರ ಐಸ್​ ಕ್ರೀಂ ಸೇವಿಸಿದವರಿಗೆ ಅರ್ಧ ಗಂಟೆಯ ಬಳಿಕ ವಾಂತಿ, ಭೇದಿ ಶುರುವಾಗಿದೆ. 

ಯಾರಬ್​ ನಗರ ಹಾಗೂ ಕೋಟೆ ನಿವಾಸಿಗಳಾದ ಸುಮಾರು ಐವತ್ತಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 40 ಮಂದಿ ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದವರನ್ನು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

BREAKING NEWS
Loading latest news...
Join our WhatsApp Channel Powered By : Online Pudu