ಮುಂಬೈ: ನಟ ಸಲ್ಮಾನ್ ಖಾನ್ ಮನೆಯ ಮೇಲೆ ಇತ್ತಿಚೆಗೆ ನಡೆದ ಗುಂಡಿನ ದಾಳಿ ಪ್ರಕರಣದ ಆರೋಪಿಯೊಬ್ಬನು ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಗುಂಡಿನ ದಾಳಿಗೆ ಶಸ್ತ್ರಾಸ್ತ್ರ ಪೂರೈಕೆದಾರರಲ್ಲಿ ಓರ್ವನಾದ ಅನುಜ್ ಥಾಪನ್ (32) ಎಂಬಾತ ಮುಂಬೈ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಅನುಜ್ ಆತ್ಮಹತ್ಯೆಗೆ ಯತ್ನಿಸಿದ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.
ಮೃತ ಅನುಜ್ ಥಾಪನ್‌ನನ್ನು ಎಪ್ರಿಲ್ 26 ರಂದು ಪಂಜಾಬ್ ನಲ್ಲಿ ಬಂಧಿಸಲಾಗಿತ್ತು. ಈತನೊಂದಿಗೆ ಇನ್ನೊಬ್ಬ ಆರೋಪಿ ಸೋನು ಸುಭಾಷ್ ಚಂದರ್ ಕೂಡ ಶಸ್ತ್ರಾಸ್ತ್ರಗಳನ್ನು ಒದಗಿಸಿದ ಆರೋಪದಲ್ಲಿ ಬಂಧನದಲ್ಲಿದ್ದಾನೆ.
ಸಲ್ಮಾನ್ ನಿವಾಸದ ಹೊರಗೆ ಗುಂಡು ಹಾರಿಸಿದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಎಂಬ ಇನ್ನಿಬ್ಬರು ಸಹ ಪೊಲೀಸ್ ವಶದಲ್ಲಿದ್ದಾರೆ. ಘಟನೆ ನಡೆದ ರಾತ್ರಿ ಮೋಟಾರ್‌ಸೈಕಲ್‌ನಲ್ಲಿ ಸ್ಥಳದಿಂದ ಹೊರಟು ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.