-->
ಉಡುಪಿ: ಸಿಡಿಲಾಘಾತಕ್ಕೆ ಶಿರ್ವ ಕಾಲೇಜು ವಿದ್ಯಾರ್ಥಿ ಬಲಿ

ಉಡುಪಿ: ಸಿಡಿಲಾಘಾತಕ್ಕೆ ಶಿರ್ವ ಕಾಲೇಜು ವಿದ್ಯಾರ್ಥಿ ಬಲಿ


ಉಡುಪಿ: ಇಲ್ಲಿನ ಗ್ರಾಪಂ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಸಿಡಿಲಾಘಾತಕ್ಕೆ ಕಾಲೇಜು ವಿದ್ಯಾರ್ಥಿಯೊಬ್ಬ ಬಲಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ.

ಶಿರ್ವ ಎಂಎಸ್ಆರ್ ಎಸ್ ಕಾಲೇಜಿನ ದ್ವಿತೀಯ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ಪುತ್ರ ರಕ್ಷಿತ್ ಪೂಜಾರಿ (20) ಮೃತಪಟ್ಟವನು.

ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ಸಿಡಿಲು ಬಡಿದ ತಕ್ಷಣ ಬಿದ್ದಿದ್ದ ಅವರನ್ನು ಮನೆಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಯ ವೇಳೆಗೆ ಮೃತಪಟ್ಟಿದ್ದಾರೆ.

ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮೃತ ವಿದ್ಯಾರ್ಥಿಯ ನಿಧನಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಿಕರಿಗೆ ಸರಕಾರದಿಂದ ಸಿಗುವ ಪರಿಹಾರವನ್ನು ತೆಗೆಸಿಕೊಡಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article