ಮಂಗಳೂರು ವಿಮಾನ ನಿಲ್ದಾಣಕ್ಕೆ ಸ್ಪೋಟಕ ಇರಿಸಿ ಸ್ಪೋಟಿಸುತ್ತೇವೆ - ಬೆದರಿಕೆ ಇಮೇಲ್


ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಪೋಟಿಸಿ ಜೀವಹಾನಿ ಮಾಡುತ್ತೇವೆ ಎಂಬ ಬೆದರಿಕೆ ಇಮೇಲ್ ರವಾನೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಎಪ್ರಿಲ್ 29 ರಂದು ಬೆಳಗ್ಗೆ 9.37ಕ್ಕೆ ಇ-ಮೇಲ್ ಸಂದೇಶ ಬಂದಿದೆ. ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗಡೆ ಸ್ಫೋಟಕಗಳನ್ನು ಇರಿಸಲಾಗಿದ್ದು, ಅದನ್ನು ಸ್ಪೋಟಿಸಿ ಜೀವಹಾನಿ ಮಾಡಲಾಗುತ್ತದೆ ಎಂದು ಇಮೇಲ್ ಬಂದಿತ್ತು. ಉಗ್ರರ ಹೆಸರಿನಲ್ಲಿ ಬಂದಿರುವ ಇಮೇಲ್ ಹಿನ್ನೆಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಾಂಬ್ ಬೆದರಿಕೆ ಇಮೇಲ್ ಹಿನ್ನೆಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಜೊತೆಗೆ ಸಂಪೂರ್ಣ ತಪಾಸಣೆಯನ್ನು ಮಾಡಲಾಗಿದೆ. ಇದೇ ರೀತಿಯ ಬೆದರಿಕೆ ಇಮೇಲ್ ಸಂದೇಶ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ದೇಶದ 25ಕ್ಕೂ ಅಧಿಕ ವಿಮಾನ ನಿಲ್ದಾಣಕ್ಕೆ ರವಾನೆಯಾಗಿದೆ ಎಂದು ತಿಳಿದು ಬಂದಿದೆ.
BREAKING NEWS
Loading latest news...
Join our WhatsApp Channel Powered By : Online Pudu