-->
1000938341
ಮಂಗಳೂರು: ವೇಷ ಕಳಚುವಾಗಲೇ ಹೃದಯಾಘಾತದಿಂದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ನಿಧನ

ಮಂಗಳೂರು: ವೇಷ ಕಳಚುವಾಗಲೇ ಹೃದಯಾಘಾತದಿಂದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ನಿಧನ

ಮಂಗಳೂರು: ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು(60) ಅವರು ಮೃತಪಟ್ಟಿದ್ದಾರೆ.

ಬುಧವಾರ ರಾತ್ರಿ ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಬಳಿಕ ಚೌಕಿಗೆ ಆಗಮಿಸಿ ಕಿರೀಟ, ಯಕ್ಷಗಾನದ ಆಭರಣ ತೆಗೆದಿಟ್ಟು ಇನ್ನೇನು ಮುಖದ ಬಣ್ಣವನ್ನು ಅಳಿಸುತ್ತಿರುವಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

ಪುತ್ತೂರಿನ ಸೇಡಿಯಾಪು ನಿವಾಸಿಯಾಗಿರುವ ಇವರು ಏಳನೇ ತರಗತಿಯವರೆಗೆ ವಿದ್ಯಾಭ್ಯಾಸ ಹೊಂದಿದ್ದರು. ತಮ್ಮ 18ನೇ ವಯಸ್ಸಿಗೆ ಯಕ್ಷಗಾನ ತಿರುಗಾಟ ಆರಂಭಿಸಿದ ಅವರು ಸುದೀರ್ಘ 40 ವರ್ಷಗಳಷ್ಟು ಕಾಲ ಯಕ್ಷಗಾನ ರಂಗದಲ್ಲಿ ವ್ಯವಸಾಯ ಮಾಡಿದ್ದರು. ಕರ್ಗಲ್ಲು ವಿಶ್ವೇಶ್ವರ ಭಟ್ ಹಾಗೂ ಕೆ.ಗೋವಿಂದ ಭಟ್ ಅವರಿಂದ ನಾಟ್ಯಾಭ್ಯಾಸ ಮಾಡಿದರು.

ಯಕ್ಷಗಾನ ರಂಗದ ಸವ್ಯಸಾಚಿ ಕಲಾವಿದರಾದ ಇವರು ಸ್ತ್ರೀವೇಷದಿಂದ ಹಿಡಿದು ಪುಂಡುವೇಷ, ರಾಜವೇಷ, ಹೆಣ್ಣುಬಣ್ಣ ಸಮರ್ಥವಾಗಿ ನಿರ್ವಹಿಸುತ್ತಿದ್ದರು. 42 ವರ್ಷಗಳಿಗಿಂತಲೂ ಅಧಿಕ ಕಾಲದಿಂದ ಗಂಗಾಧರ ಪುತ್ತೂರು ಧರ್ಮಸ್ಥಳ ಮೇಳದಲ್ಲಿಯೇ ಕಲಾವಿದರಾಗಿ ತಿರುಗಾಟ ಮಾಡಿದ್ದರು. ಅನಿವಾರ್ಯ ಸಂದರ್ಭದಲ್ಲಿ ಯಾವಪಾತ್ರವನ್ನು ನಿರ್ವಹಿಸುವ ಕಲಾವಿದರು ಸಿಗುವುದು ಕಷ್ಟ. ಆದ್ದರಿಂದ ಯಾವ ಪಾತ್ರವನ್ನಾದರೂ ಲೀಲಾಜಾಲವಾಗಿ ಮಾಡಬಲ್ಲ ವಿರಳಾತಿವಿರಳ ಕಲಾವಿದರಲ್ಲಿ ಗಂಗಾಧರ ಪುತ್ತೂರು ಒಬ್ಬರು. ಕಳೆದ 42ವರ್ಷಗಳ ತಿರುಗಾಟದಲ್ಲಿ ಅವರು ಮಹಾನ್ ಕಲಾವಿದರೊಂದಿಗೆ ತಿರುಗಾಟ ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article