-->
1000938341
ಹಾಸನ ಪೆನ್​ ಡ್ರೈವ್ ಪ್ರಕರಣ:  ವಿಡಿಯೋ ಶೇರ್ ಮಾಡಿದರೆ ಕಾನೂನು ಕ್ರಮದ ಎಚ್ಚರಿಕೆ - Hassan Pen Drive Case

ಹಾಸನ ಪೆನ್​ ಡ್ರೈವ್ ಪ್ರಕರಣ: ವಿಡಿಯೋ ಶೇರ್ ಮಾಡಿದರೆ ಕಾನೂನು ಕ್ರಮದ ಎಚ್ಚರಿಕೆ - Hassan Pen Drive Case
ಬೆಂಗಳೂರು: ಅಶ್ಲೀಲ ವಿಡಿಯೋಗಳನ್ನು ವಾಟ್ಸ್‌ಆ್ಯಪ್ ಅಥವಾ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹಾಸನ ಪೆನ್ ಡ್ರೈವ್ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(SIT) ಎಚ್ಚರಿಕೆ ನೀಡಿದೆ.


 ಅಶ್ಲೀಲ ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಶೇರ್ ಆಗಿವೆ. ವಾಟ್ಸ್‌ಆ್ಯಪ್ ಮೂಲಕ ಒಬ್ಬರಿಂದ ಒಬ್ಬರಿಗೆ ನಿರಂತರ ಶೇರ್ ಆಗುತ್ತಿದೆ.‌ ಇದರಿಂದ ಸಂತ್ರಸ್ತೆಯರ ಘನತೆ ಹಾಗೂ ಗೌರವಕ್ಕೆ ಚ್ಯುತಿಯಾಗುತ್ತಿದೆ. ಹೀಗಾಗಿ ಉದ್ದೇಶಪೂರ್ವವಾಗಿ ವಾಟ್ಸ್‌ಆ್ಯಪ್ ಸೇರಿ‌ ಇನ್ನಿತರ ಆ್ಯಪ್​​ಗಳ ಮುಖಾಂತರ ವಿಡಿಯೋ ಹಂಚುವುದು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಕಲಂ 69 (ಎ) ಹಾಗೂ 228 (ಎ) 1, 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು SIT ಪ್ರಕಟಣೆಯಲ್ಲಿ ತಿಳಿಸಿದೆ.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರಿಗೆ ಕಾನೂನು ನೆರವು ನೀಡಲು ಈಗಾಗಲೇ ಎಸ್ಐಟಿ ಸಹಾಯವಾಣಿ ಆರಂಭಿಸಿದೆ. ಬೆಳಗ್ಗೆ 8ರಿಂದ ರಾತ್ರಿ 8ವರೆಗೆ ಕರೆ ಮಾಡಿ ಮಾತನಾಡಬಹುದು. ಸಂತ್ರಸ್ತೆಯರ ಹೆಸರು, ವಿಳಾಸ ಸೇರಿದಂತೆ ಇನ್ನಿತರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡ ತಿಳಿಸಿದೆ‌‌‌.‌ ಈ ಬೆನ್ನಲ್ಲೇ ಕೆಲವು ಮಹಿಳೆಯರು ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದ. ಮಹಿಳೆಯರ ಹೆಸರು ಹಾಗೂ ವಿಳಾಸ ನಮೂದಿಸಿಕೊಂಡಿರುವ SIT ತದನಂತರ ಅವರನ್ನು ಸಂಪರ್ಕಿಸಿ ದೌರ್ಜನ್ಯದ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದೆ.

Ads on article

Advertise in articles 1

advertising articles 2

Advertise under the article