ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಇರಿದು ಕೊಲೆಗೈದು ಯುವಕ ಪರಾರಿ
Wednesday, May 15, 2024
ಹುಬ್ಬಳ್ಳಿ: ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಕುಪಿತಗೊಂಡ ಯುವಕನೋರ್ವನು ಯುವತಿಯೊಬ್ಬಳನ್ನು ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ತಾಲೂಕಿನ ವೀರಾಪುರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ವಿಶ್ವ ಅಲಿಯಾಸ್ ಗಿರೀಶ್ ಸಾವಂತ್ (21) ಆರೋಪಿ. ಈತ ವೀರಾಪುರ ಓಣಿಯ ದೇವಿಗುಡಿ ನಿವಾಸಿ ಅಂಜಲಿ (20) ಎಂಬಾಕೆಯನ್ನು ಕಳೆದ ಹಲವು ದಿನಗಳಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದ. ಆದರೆ ಅಂಜಲಿ ಈತನ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ.
ಇದರಿಂದ ಕುಪಿಗೊಂಡ ಗಿರೀಶ್ ಸಾವಂತ್ ಇಂದು ಬೆಳ್ಳಂಬೆಳಗ್ಗೆ ಯುವತಿಯ ಮನೆಗೆ ಬಂದು ಆಕೆಯ ಬಾಗಿಲು ತಟ್ಟಿದ್ದಾನೆ. ಆಕೆ ಬಾಗಿಲು ತೆರೆಯುತ್ತಿದ್ದಂತೆಯೇ ಆಕೆಯ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.