-->
1000938341
ಕೆಲವಡೆ ಇಂದು ಮಳೆ ಅಗುವ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ

ಕೆಲವಡೆ ಇಂದು ಮಳೆ ಅಗುವ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ



ಬೆಂಗಳೂರು: ರಾಜ್ಯದಲ್ಲಿ ಮತ್ತೆ ವರುಣ ದೇವನ ಕೃಪೆ ಮಾಡುವ ಸಾದ್ಯತೆ ಉಂಟು ಎಂದು ಹವಮಾನ ಇಲಾಖೆ ಸೂಚನೆ ನೀಡುತ್ತಿದೆ 
ಜ್ಯದ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಇಂದು ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ದಿನೇ ದಿನೇ ಬಿಸಿಲು ಹೆಚ್ಚುತಿದೆ. ರಾಜ್ಯಾದ್ಯಂತ ಮೇ 5ರವರೆಗೆ ಒಣ ಹವೆ ಇರುವ ಸಾಧ್ಯತೆ ಇದೆ. ಮೇ 6ರಂದು ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಮೇ 7ರಂದು ಕೂಡ ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಮೇ 1 ರಿಂದ ಮೇ 4ರವರೆಗೆ ಬೀದ‌ರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ (ಬಯಲು ಪ್ರದೇಶ), ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು (ಬಯಲು ಪ್ರದೇಶ) ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮೇ 4 ರವರೆಗೆ ಬಿಸಿ ಮತ್ತು ಆದ್ರ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.
ಮುಂದಿನ 5 ದಿನಗಳವರೆಗೆ ಬಾಗಲಕೋಟೆ, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇನ್ನು ಮುಂದಿನ 5 ದಿನಗಳವರೆಗೆ ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ

Ads on article

Advertise in articles 1

advertising articles 2

Advertise under the article