ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ವಿಜಯೇಂದ್ರ, ಅಮಿತ್ ಮಾಳವೀಯ ಅವರಿಗೆ ಪೊಲೀಸ್‌ ನೋಟೀಸ್‌

ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ವಿಜಯೇಂದ್ರ, ಅಮಿತ್ ಮಾಳವೀಯ ಅವರಿಗೆ ಪೊಲೀಸ್‌ ನೋಟೀಸ್‌





ಪ್ರಚೋದನಾಕಾರಿ ವೀಡಿಯೋ ಪೋಸ್ಟ್‌ ಮಾಡಿದ್ದ ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ, ಬಿಜೆಪಿ ರಾಜ್ಯ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಮತ್ತು ಬಿಜೆಪಿಯ ಮಾಧ್ಯಮ ಉಸ್ತುವಾರಿ ಅಮಿತ್ ಮಾಳವೀಯ ಅವರಿಗೆ ಕರ್ನಾಟಕದ ಹೈಗ್ರೌಂಡ್ ಪೊಲೀಸರು ನೋಟೀಸ್‌ ಜಾರಿಗೊಳಿಸಿದ್ದಾರೆ.


ವೀಡಿಯೋ ಸಂಬಂಧಿಸಿದಂತೆ ಈ ನೋಟೀಸ್‌ಗೆ 7 ದಿನಗಳೊಳಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ. ನೀತಿ ಸಂಹಿತೆ ಜಾರಿಯಲ್ಲಿ ಇರುವ ಸಂದರ್ಭದಲ್ಲೇ ಎಚ್ಚರ ಎಚ್ಚರ ಎಚ್ಚರ.. ಎಂಬ ಶೀರ್ಷಿಕೆಯೊಂದಿಗೆ ವೀಡಿಯೋ ತುಣುಕೊಂದನ್ನು ಪ್ರಸಾರ ಮಾಡಲಾಗಿತ್ತು.


ಇದರಲ್ಲಿ ಸಮಾಜದ ಎರಡು ವರ್ಗಗಳ ನಡುವೆ ದ್ವೇಷ ಉಂಟು ಮಾಡುವ ಅಂಶ ಇದ್ದು, ವೈಷಮ್ಯ ಮೂಡಿಸುವ ಉದ್ದೇಶದಿಂದ ವೀಡಿಯೋ ಅಪ್‌ಲೋಡ್ ಮಾಡಲಾಗಿದೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಪೊಲೀಸರಿಗೆ ದೂರು ನೀಡಿದ್ದರು.