ಪ್ರಜ್ವಲ್ ರೇವಣ್ಣ ವಿದೇಶದಿಂದ ಮಂಗಳೂರಿಗೆ ಆಗಮನ ಸಾಧ್ಯತೆ: ವಶಕ್ಕೆ ಪಡೆಯಲು SIT ಸಿದ್ಧತೆ - Prajwal Revanna Case
ಬೆಂಗಳೂರು: ಹಾಸನ ಲೈಂಗಿಕ ಪ್ರಕರಣದ ಆರೋಪದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡ ಮೊಮ್ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕಣ್ಗಾವಲಿರಿಸಲಾಗಿದೆ. ಪ್ರಜ್ವಲ್ ಪತ್ತೆಗಾಗಿ ಈಗಾಗಲೇ ಲುಕ್‌ಔಟ್ ನೋಟಿಸ್ ಕೂಡಾ ಜಾರಿಯಾಗಿರುವುದರಿಂದ ಪ್ರಜ್ವಲ್ ಭಾರತಕ್ಕೆ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆದುಕೊಳ್ಳಲು ಎಸ್ಐಟಿ ಸಿದ್ಧತೆ ಮಾಡಿಕೊಂಡಿದೆ.
ಪ್ರಕರಣ ಸಂಬಂಧ ಮತ್ತೆ ಮೂವರು ಸಂತ್ರಸ್ತೆಯರು ಎಸ್ಐಟಿ ತನಿಖಾಧಿಕಾರಿಗಳ ಸಂಪರ್ಕಕ್ಕೆ ಸಿಕ್ಕಿದ್ದು, ಈ ಬಗ್ಗೆ ವಿಚಾರಣೆ ಈಗಾಗಲೇ ಆರಂಭವಾಗಿದೆ. ವಿಚಾರಣೆಯ ಬಳಿಕ ಪ್ರತ್ಯೇಕ ಕೇಸುಗಳನ್ನು ದಾಖಲಿಸಿಕೊಳ್ಳುವ ಸಾಧ್ಯತೆಯು ಇದೆ.
ಹಾಸನ ವಿಡಿಯೋ ಪ್ರಕರಣ ಸಂಬಂಧ ಸಾಕಷ್ಟು ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ರೇವಣ್ಣರಿಗೆ SIT ನೋಟಿಸ್ ನೀಡಿತ್ತು. ವಿದೇಶದಲ್ಲಿರುವುದರಿಂದ ವಿಚಾರಣೆಗೆ ಹಾಜರಾಗಲು ಅವರು 7 ದಿನಗಳ ಕಾಲಾವಕಾಶ ಕೋರಿದ್ದರು. ಆದರೆ ಎಸ್ಐಟಿ ಈ ಮನವಿಯನ್ನು ತಿರಸ್ಕಾರ ಮಾಡಿ ಜೊತೆಗೆ ಲುಕ್‌ಔಟ್ ನೋಟಿಸ್ ಜಾರಿ ಮಾಡಿತ್ತು.
ಇನ್ನೊಂದೆಡೆ, ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ ಅವರನ್ನು ಶನಿವಾರ ಬಂಧಿಸಲಾಗಿದ್ದು, ಇಂದು ನ್ಯಾಯಾಧೀಶರೆದುರು ಹಾಜರುಪಡಿಸಲು ಎಸ್ಐಟಿ ಸಿದ್ಧತೆ ಮಾಡಿಕೊಂಡಿದೆ