SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ

 

 


ಕೊಡಗು:  ಮೇ 09 ರಂದು ಎಸ್ಎಸ್ಎಲ್​​ಸಿ ಫಲಿತಾಂಶ ಪ್ರಕಟಗೊಂಡಿದೆ. ಎಸ್ಎಸ್ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದ ಕೊಡಗಿನ ಸೋಮವಾರಪೇಟೆಯ ಸೂರ್ಲಬ್ಬಿ ಗ್ರಾಮಾದಲ್ಲಿ ವಿದ್ಯಾರ್ಥಿನಿಯ ತಲೆ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಓಂಕಾರಾಪ್ಪ ಕೊಲೆ ಆರೋಪಿ. ಮೀನಾ ಮೃತ ವಿದ್ಯಾರ್ಥಿನಿ.

ಮೀನಾ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಗುರುವಾರ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮೀನಾ ಉತ್ತಮ ಅಂಕ ಪಡೆದು ಪಾಸಾಗಿದ್ದಳು. ​ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾದ ಖುಷಿಯಲ್ಲಿ ಮೀನಾ ಮತ್ತು ಆಕೆಯ ಪೋಷಕರು ಇದ್ದರು. ಆದರೆ ಖುಷಿ ಹೆಚ್ಚು ಹೊತ್ತು ಇರಲಿಲ್ಲ.

ಆರೋಪಿ ಓಂಕಾರಪ್ಪ ಸಾಯಂಕಾಲ ಸಮಯದಲ್ಲಿ ಮೀನಾಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಮಚ್ಚಿನಿಂದ ವಿದ್ಯಾರ್ಥಿನಿಯ ತಲೆ ಕತ್ತರಿಸಿ ರುಂಡ-ಮುಂಡ ಬೇರ್ಪಡಿಸಿ ವಿಕೃತಿ ಮೆರೆದಿದ್ದಾನೆ.

ಓಂಕಾರಪ್ಪನೊಂದಿಗೆ ಮೀನಾಳ ನಿಶ್ಚಿತಾರ್ಥ ನಿನ್ನೆ ಫಿಕ್ಸ್ಮಾಡಲಾಗಿತ್ತು. ವಿಚಾರ ತಿಳಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ನಿಶ್ಚಿತಾರ್ಥ ನಿಲ್ಲಿಸಿದ್ದಾರೆ. ಬಳಿಕ ಎರಡೂ ಕುಟುಂಬದವರು ತಮ್ಮ ತಮ್ಮ ಮನೆಗೆ ತೆರಳಿದ್ದಾರೆ. ಆರೋಪಿ ಕೂಡ ಮನೆಗೆ ವಾಪಸ್ಆಗಿದ್ದನಂತೆ. ಇದೇ ಸಿಟ್ಟಿನಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ಕೊಲೆ ನಡೆದ ಸ್ಥಳಕ್ಕೆ ಶ್ವಾನ ದಳ, ವಿಧಿ ವಿಜ್ಞಾನ ತಂಡಭೇಟಿ ನೀಡಿದೆ. ಹಾಗೂ ಕೊಡಗು ಹೆಚ್ಚುವರಿ ಎಸ್ಪಿ ಸುಂದರ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದಅನತಿ ದೂರದಲ್ಲಿ ಮಚ್ಚು ಪತ್ತೆಯಾಗಿದೆ. ಪೊಲೀಸರು ಆರೋಪಿಗಾಗಿ ತಿವ್ರ ಶೋಧ ನಡೆಸುತ್ತಿದ್ದಾರೆ.