-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಳ್ತಂಗಡಿ: ಐದು ಬಾರಿ ವಿಧಾನಸಭೆ ಪ್ರವೇಶಿಸಿದ್ದ ಮಾಜಿ ಶಾಸಕ ವಸಂತ ಬಂಗೇರ ನಿಧನ

ಬೆಳ್ತಂಗಡಿ: ಐದು ಬಾರಿ ವಿಧಾನಸಭೆ ಪ್ರವೇಶಿಸಿದ್ದ ಮಾಜಿ ಶಾಸಕ ವಸಂತ ಬಂಗೇರ ನಿಧನ



ಬೆಳ್ತಂಗಡಿ: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರು ಪಕ್ಷಗಳಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಐದು ಬಾರಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದ ಮಾಜಿ ಶಾಸಕ ಕೆ.ವಸಂತ ಬಂಗೇರ(79) ದೀರ್ಘಕಾಲದ ಅಸೌಖ್ಯದಿಂದ ಬುಧವಾರ ನಿಧನರಾಗಿದ್ದಾರೆ.

ದ.ಕ.ಜಿಲ್ಲೆಯಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ವಸಂತ ಬಂಗೇರ ಬುಧವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ನಾಳೆ ಮುಂಜಾನೆ ಅವರ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ಸಾಧ್ಯತೆಯಿದೆ. ಬಳಿಕ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. 1946ರ ಜ.15ರಂದು ಬೆಳ್ತಂಗಡಿಯ ಕುವೆಟ್ಟುವಿನಲ್ಲಿ ಹುಟ್ಟಿದ ವಸಂತ ಬಂಗೇರ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿತ್ತು. ಆದ್ದರಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ನಿರಂತರ ಚಿಕಿತ್ಸೆ ಪಡೆಯುತ್ತಿದ್ದರು.

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಚುನಾವಣೆ ಎದುರಿಸಿ ಗೆಲುವು ಸಾಧಿಸಿ ವಸಂತ ಬಂಗೇರ ದಾಖಲೆ ಬರೆದಿದ್ದಾರೆ. 1983 ಮತ್ತು 1985ರಲ್ಲಿ ವಸಂತ ಬಂಗೇರ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಶಾಸಕರಾಗಿದ್ದರು. ಆದರೆ 1989ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತ ಬಂಗೇರ ಸೋಲು ಅನುಭವಿಸಿದರು‌. 1994ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1999 ಮತ್ತು 2004ರಲ್ಲಿ ಈ ಕ್ಷೇತ್ರ ಬಿಜೆಪಿ ಪಾಲಾಯಿತು‌. ಬಳಿಕ ಜೆಡಿಎಸ್ ನಿಂದ ಸ್ಪರ್ಧಿಸಿದ ವಂಸತ ಬಂಗೇರ ಅವರನ್ನು ಅವರ ಸಹೋದರ ಪ್ರಭಾಕರ ಬಂಗೇರ ಸೋಲಿಸಿದ್ದರು‌. 

2008ರಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ವಸಂತ ಬಂಗೇರ ಸಹೋದರನನ್ನು ಸೋಲಿಸಿ ಮತ್ತೆ ವಿಧಾನಸಭೆ ಪ್ರವೇಶಿಸಿದರು. 2013ರಲ್ಲಿ ವಸಂತ ಬಂಗೇರ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಬಿಜೆಪಿಯ ರಂಜನ್ ಗೌಡ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾದರು. 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಹರೀಶ್ ಪೂಂಜಾ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿದ ಬಂಗೇರರನ್ನು ಸೋಲಿಸಿದ್ದರು.

Ads on article

Advertise in articles 1

advertising articles 2

Advertise under the article

ಸುರ