ನಟ ದರ್ಶನ್ ಮತ್ತು 13 ಆರೋಪಿಗಳಿಗೆ 6ದಿನಗಳ ನ್ಯಾಯಾಂಗ ಬಂಧನ


ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆರೋಪದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ಹಾಗೂ ಎಲ್ಲ 13 ಆರೋಪಗಳನ್ನು ನ್ಯಾಯಾಲಯವು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆರೋಪಿಗಳಾದ ನಟ ದರ್ಶನ್ ಹಾಗೂ ಅವರ ಮಾಜಿ ಪ್ರೇಯಸಿ ಪವಿತ್ರಾ ಗೌಡ ಸೇರಿದಂತೆ ಎಲ್ಲಾ 13 ಮಂದಿ ಆರೋಪಿಗಳನ್ನು ಪೊಲೀಸರು ಮಂಗಳವಾರ ಸಂಜೆ ಬೆಂಗಳೂರಿನ ಮ್ಯಾಜಿಸ್ಟ್ರೀಟ್ ಕೋರ್ಟ್‌ ಮುಂದೆ ಹಾಜರು ಪಡಿಸಿದ್ದಾರೆ. ಪ್ರಕರಣದ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶರು, ನಿಮ್ಮ ಬಂಧನದ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದರೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ದರ್ಶನ್, ಹೌದು ನೀಡಿದ್ದರು ಎಂದರು ಉತ್ತರಿಸಿದರು.

ಈ ವೇಳೆ ತನಿಖಾಧಿಕಾರಿಯವರು ನಟ ದರ್ಶನ್ ಅವರನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ವಾದಿಸಿದರು. ಇದಕ್ಕೆ ಪ್ರತಿಯಾಗಿ ವಾದಿಸಿದ ದರ್ಶನ್ ಪರ ವಕೀಲ ನಾರಾಯಣಸ್ವಾಮಿ ಅವರು, ತಮ್ಮ ಕಕ್ಷಿದಾರನನ್ನು ಕಸ್ಟಡಿಗೆ ಒಪ್ಪಿಸುವ ಅಗತ್ಯವಿಲ್ಲವೆಂದು ಎಂದಿದ್ದಾರೆ.

ಪ್ರಕರಣದಲ್ಲಿ ದರ್ಶನ್ ವಿರುದ್ಧ ಯಾವುದೇ ಆರೋಪ ಕೇಳಿ ಬಂದಿಲ್ಲ. ಹೀಗಾಗಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕು ಎಂದು ವಕೀಲ ನಾರಾಯಣಸ್ವಾಮಿ ಕೋರ್ಟ್‌ಗೆ ಕೇಳಿಕೊಂಡರು. ಈ ಮಧ್ಯೆ ವಿಚಾರಣೆ ವೇಳೆ ನಟ ದರ್ಶನ್ ಹಾಗೂ ಅವರ ಆಪ್ತ ಪವಿತ್ರಾ ಗೌಡ ಕಣ್ಣೀರು ಹಾಕಿದರು. ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ.

BREAKING NEWS
Loading latest news...
Join our WhatsApp Channel Powered By : Online Pudu