-->
1000938341
ಗೃಹಪ್ರವೇಶದಲ್ಲಿ ಊಟ ಮಾಡಿದ 20ಕ್ಕೂ ಅಧಿಕ ಮಂದಿ ಅಸ್ವಸ್ಥ : ಓರ್ವ ವೃದ್ಧೆ ಸಾವು

ಗೃಹಪ್ರವೇಶದಲ್ಲಿ ಊಟ ಮಾಡಿದ 20ಕ್ಕೂ ಅಧಿಕ ಮಂದಿ ಅಸ್ವಸ್ಥ : ಓರ್ವ ವೃದ್ಧೆ ಸಾವು


ಮೈಸೂರು: ಇಲ್ಲಿನ‌ ಮಾರ್ಬಳ್ಳಿಯಲ್ಲಿ ರವಿವಾರ ನಡೆದಿರುವ ಮನೆಯೊಂದರ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಊಟ ಮಾಡಿರುವ ಗ್ರಾಮಸ್ಥರು ಈಗ ಆಸ್ಪತ್ರೆಗೆ ಸೇರಿದ್ದಾರೆ. ಅವರಲ್ಲಿ ಓರ್ವ ವೃದ್ಧೆ ಮೃತಪಟ್ಟಿದ್ದಾರೆ.

ಗೃಹಪ್ರವೇಶದಲ್ಲಿ ಊಟ ಸೇವಿಸಿದ ಬಳಿಕ ಮಕ್ಕಳು ಸೇರಿದಂತೆ 20ಕ್ಕೂ ಅಧಿಕ ಮಂದಿಗೆ ವಾಂತಿ, ಭೇದಿ ಆರಂಭವಾಗಿದೆ. ಇವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇವರಲ್ಲಿ ಶಿವಮ್ಮ (65) ಎಂಬಾಕೆ ಮೃತಪಟ್ಟ ದುರ್ದೈವಿ.

ಇತ್ತ ತೀವ್ರ ಅಸ್ವಸ್ಥಗೊಂಡವರನ್ನು ಮೈಸೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹಲವರಿಗೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಚಿಕಿತ್ಸೆ ಕೊಡಲಾಗಿದೆ. ಗ್ರಾಮಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ads on article

Advertise in articles 1

advertising articles 2

Advertise under the article