-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸುಳ್ಯ: 800 ರೂಪಾಯಿಗಾಗಿ ಯುವಕನ ಕೊಲೆ

ಸುಳ್ಯ: 800 ರೂಪಾಯಿಗಾಗಿ ಯುವಕನ ಕೊಲೆ

 


ಮಂಗಳೂರುಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಸುಳ್ಯ ಪೊಲೀಸರು 800 ರೂಪಾಯಿಗಾಗಿ ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

ಕಡಬ ತಾಲೂಕಿನ ಎಡಮಂಗಲದ ಉದಯ ಕುಮಾರ್ ನಾಯ್ಕ್ (35) ಬಂಧಿತ ಆರೋಪಿರವಿವಾರ ರಾತ್ರಿ ವಿರಾಜಪೇಟೆಯ ವಸಂತ (45) ಎಂಬ ವ್ಯಕ್ತಿಯ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈಯಲಾಗಿತ್ತುಸೋಮವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.

 

 

ಉದಯ ಕುಮಾರ್ ಗೆ ಬಾರೊಂದರಲ್ಲಿ ವಸಂತ ಎಂಬಾತನ ಪರಿಚಯವಾಗಿದ್ದುರವಿವಾರ ರಾತ್ರಿ ಕಾಂತಮಂಗಲಕ್ಕೆ ಅಟೋ ರಿಕ್ಷಾದಲ್ಲಿ ಬಂದು ಶಾಲಾ ಜಗಲಿಯಲ್ಲಿ ಮಲಗಿದ್ದರುವಸಂತ ಎಂಬವರ ಬಳಿ 800 ರೂಹಣ ಇರುವುದನ್ನು ಗಮನಿಸಿ ಉದಯ ಆತನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದುಕೊಲೆ ಮಾಡಿದ ಬಳಿಕ ಬೆಳಿಗ್ಗೆ ಹಣ ಹಾಗೂ ಮೊಬೈಲ್ ನೊಂದಿಗೆ ಅಲ್ಲಿಂದ ಪರಾರಿಯಾಗಿದ್ದರುತನಿಖೆಗಿಳಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆಆರೋಪಿಯೂ ಮನೆಗೆ ತೆರಳದೇ ಎಲ್ಲಂದರಲ್ಲಿ ಇರುತ್ತಿದ್ದುದು ಬೆಳಕಿಗೆ ಬಂದಿತ್ತು.

 

ಎಸ್.ಪಿ.ರಿಷ್ಯಂತ್ ಸಿ.ಬಿ., .ಎಸ್.ಪಿರಾಜೇಂದ್ರ ಡಿ.ಎಸ್., ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ ಮಾರ್ಗದರ್ಶನದಲ್ಲಿ ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ ನೇತೃತ್ವದಲ್ಲಿ ಪುತ್ತೂರು ಇನ್ಸ್ ಪೆಕ್ಟರ್ ಸತೀಶ್ ಜೆ.ಜೆ., ಸುಳ್ಯ ಎಸೈ ಮಹೇಶ್ಸುಬ್ರಹ್ಮಣ್ಯ ಎಸೈ ಕಾರ್ತಿಕ್ಸಿಬ್ಬಂದಿಗಳಾದ ಉದಯ್ ಗೌಡಪ್ರಕಾಶ್ಉದಯ್ಅನಿಲ್ ಸೇರಿದಂತೆ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 

Ads on article

Advertise in articles 1

advertising articles 2

Advertise under the article

ಸುರ