ಬೆಳ್ತಂಗಡಿ: ಭೀಕರ ರಸ್ತೆ ಅಪಘಾತಕ್ಕೆ ಉದ್ಯಮಿಯ ಪುತ್ರ ಬಲಿ - ನಜ್ಜುಗುಜ್ಜಾದ ಬೆಂಜ್ ಕಾರು
Saturday, June 29, 2024
ಬೆಳ್ತಂಗಡಿ: ಇಲ್ಲಿನ ಉಜಿರೆಯಲ್ಲಿ ಶನಿವಾರ ನಸುಕಿನ ಜಾವ ಸಂಭವಿಸಿರುವ ಭೀಕರ ರಸ್ತೆ ಅಪಘಾತಕ್ಕೆ ಉದ್ಯಮಿಯ ಪುತ್ರ ಬಲಿಯಾದ ಘಟನೆ ನಡೆದಿದೆ.
ಉದ್ಯಮಿ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕ ಎಂ ಆರ್ ನಾಯಕ್ ಪುತ್ರ ಪ್ರಜ್ವಲ್ ಮೃತಪಟ್ಟ ದುರ್ದೈವಿ.
ಇಂದು ಬೆಳಗ್ಗಿನ ಜಾವ ಪ್ರಜ್ವಲ್ ತಮ್ಮ ಬೆಂಜ್ ಕಾರಿನಲ್ಲಿ ಸಂಚಾರ ಮಾಡುತ್ತಿದ್ದರು. ಉಜಿರೆ ತಲುಪುತ್ತಿದ್ದಂತೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಡಿವೈಡರ್ ಹಾರಿ ಪಕ್ಕದ ರಸ್ತೆಗೆ ಉರುಳಿ ಬಿದ್ದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಜ್ವಲ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಪ್ರಜ್ವಲ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.