ದಕ್ಷಿಣ ಕನ್ನಡ ಬಿಜೆಪಿಯಿಂದ ಬೃಹತ್ ವಾಹನ ಜಾಥಾ, ವಿಜಯೋತ್ಸವ

ದಕ್ಷಿಣ ಕನ್ನಡ ಬಿಜೆಪಿಯಿಂದ ಬೃಹತ್ ವಾಹನ ಜಾಥಾ, ವಿಜಯೋತ್ಸವ






ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಭದ್ರಕೋಟೆಯಾದ ದಕ್ಷಿಣ ಕನ್ನಡದ ಸಂಸದರಾಗಿ ಅಭೂತಪೂರ್ವ ಜಯ ದಾಖಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಜಯೋತ್ಸವ ಮತ್ತು ಬೃಹತ್ ವಾಹನ ಜಾಥಾ ನಡೆಯಲಿದೆ.


ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ ಹಾಗೂ ಕಾರ್ಯಕರ್ತರ ವಿಜಯೋತ್ಸವ ಕಾರ್ಯಕ್ರಮ ಸೋಮವಾರ 17.6.2024 ರಂದು ಸಂಜೆ 4.30ಕ್ಕೆ ನಗರದ ಕುದ್ಮಲ್ ರಂಗರಾವ್ ಪುರ ಭವನದಲ್ಲಿ ಅದ್ದೂರಿಯಾಗಿ ನಡೆಯಲಿದೆ.


ಉಡುಪಿ ಚಿಕ್ಕಮಂಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಚುನಾಯಿತರಾದ ಡಾ. ಧನಂಜಯ ಸರ್ಜಿ, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ವಿಧಾನ ಪರಿಷತ್ತಿಗೆ ಚುನಾಯಿತರಾದ ಎಸ್ ಎಲ್ ಭೋಜೇಗೌಡ ಅವರಿಗೂ ಅಭಿನಂದನೆ, ಸನ್ಮಾನ ನಡೆಯಲಿದೆ.


ಅಭಿನಂದನ ಸಮಾರಂಭಕ್ಕೆ ಮುನ್ನ ಸಂಜೆ 3.30ಕ್ಕೆ ನಗರದ ಬಂಟ್ಸ್ ಹಾಸ್ಟೆಲ್ ವೃತ್ತದಿಂದ ಪುರಭವನದ ತನಕ ಬೃಹತ್ ವಾಹನ ಜಾಥ ನಡೆಯಲಿದ್ದು ವಿಜಯೋತ್ಸವ ಕಾರ್ಯಕ್ರಮ ಇನ್ನಷ್ಟು ಮೆರುಗನ್ನು ನೀಡಲಿದೆ.


ಈ ವಿಜಯೋತ್ಸವದ ಅಭಿನಂದನಾ ಸಮಾರಂಭ ಮತ್ತು ವಾಹನ ಜಾಥದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬಿಜೆಪಿ ಜಿಲ್ಲಾ ಸಮಿತಿಯು ಪ್ರಕಟಣೆಯ ಮೂಲಕ ವಿನಂತಿಸಿದೆ.




BREAKING NEWS
Loading latest news...
Join our WhatsApp Channel Powered By : Online Pudu