ಮಂಗಳೂರು: ದ.ಕ.ಜಿಲ್ಲೆಯ ಶಾಲಾ - ಪಿಯು ಗಳಿಗೆ ನಾಳೆಯೂ ರಜೆ
Thursday, June 27, 2024
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 28ರಂದು ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಸೇರಿದಂತೆ ನಾಳೆ ಪಿಯುಸಿಗೂ ರಜೆ ಘೋಷಿಸಿದ್ದಾರೆ.
ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಗುರುವಾರ ಖಾಸಗಿ, ಅನುದಾನಿತ ಮತ್ತು ಸರ್ಕಾರಿ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಅಲ್ಲದೆ, ಜನರು ನೀರು ಇರುವ ತಗ್ಗು ಪ್ರದೇಶ, ನದಿ ತೀರ, ಕೆರೆಗಳ ಬಳಿ ತೆರಳದಂತೆ ಜಾಗ್ರತೆ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.