ಕುಂದಾಪುರದಲ್ಲೂ ಪ್ರಜ್ವಲ್ ರೇವಣ್ಣ ಮಾದರಿ ಲೈಂಗಿಕ ದೌರ್ಜನ್ಯ - 'ವಿದ್ಯಾರ್ಥಿನಿಯರೇ ಈತನ ಟಾರ್ಗೆಟ್'


ಕುಂದಾಪುರ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಂತಯೇ ಕುಂದಾಪುದರದಲ್ಲಿ ಹಲವಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಯುವಉದ್ಯಮಿಯೊಬ್ಬ ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. 

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದೀಗ ಪೊಕ್ಸೊ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

ಶ್ರೇಯಸ್‌ ನಾಯ್ಕ (25) ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ. 

ಶ್ರೇಯಸ್ ನಾಯ್ಕ್ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ.‌ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ ಟಾಪ್‌ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಅಪ್ರಾಪ್ತೆ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ನಿರ್ಜನ ಪ್ರದೇಶದಲ್ಲಿ ತನ್ನ ಕಾರಿನೊಳಗಡೆಯೇ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ.

ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಆಕೆ ತನ್ನೊಂದಿಗೆ ಬರುವಂತೆ ಮಾಡಿ ಅತ್ಯಾಚಾರ ಎಸಗಿದ್ದಾನೆ. ಪರಿಣಾಮ ಬಾಲಕಿ ಇದೀಗ ಆಗಿದ್ದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಈತನ ವಿರುದ್ಧ ಮೇ 18ರಂದು ಪೊಕ್ಸೊ ಪ್ರಕರಣ ದಾಖಲಾಗುತ್ತಿದ್ದಂತೆ ಆರೊಪಿ ಪರಾರಿಯಾಗಿದ್ದಾನೆ. 
BREAKING NEWS
Loading latest news...
Join our WhatsApp Channel Powered By : Online Pudu