-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹೈದರಾಬಾದ್‌ನಲ್ಲಿ ಬಾಲಕಿಯನ್ನು ಅಪಹರಿಸಿ ಗ್ಯಾಂಗ್ ರೇಪ್- 10ಮಂದಿ ಅರೆಸ್ಟ್

ಹೈದರಾಬಾದ್‌ನಲ್ಲಿ ಬಾಲಕಿಯನ್ನು ಅಪಹರಿಸಿ ಗ್ಯಾಂಗ್ ರೇಪ್- 10ಮಂದಿ ಅರೆಸ್ಟ್



ಹೈದರಾಬಾದ್‌: 10 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಪೈಶಾಚಿಕ ಕೃತ್ಯವೊಂದು ಹೈದರಾಬಾದ್‌ನಲ್ಲಿ ನಡೆದಿದೆ.

ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಸಂತ್ರಸ್ತೆಯ ಕುಟುಂಬ ನೀಡಿರುವ ದೂರಿನನ್ವಯ ಪೊಲೀಸರು 10ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಚಕ್ಕೋಲು ನರೇಶ್ (26), ವಿಜಯ್ ಕುಮಾರ್ (23), ಬಾಲಾಜಿ (23), ಗುಡ್ಡಂತಿ ಕೃಷ್ಣ (22), ಕಿರಣ್ ಕುಮಾರ್ (26), ಬೊಳ್ಳೆಪೋಗು ಅಜಯ್ (23), ಜೇಮ್ಸ್ ಕ್ಷೇವಿಯರ್ (24), ದೀಪಕ್ (25), ಸಬವತ್ ಹತ್ಯಾ ನಾಯ್ಕ (25), ಇಂಜಮುರಿ ಮಧು (30) ಬಂಧಿತ ಆರೋಪಿಗಳು.

ಅತ್ಯಾಚಾರ ಎಸಗಕ್ಕೂ ಮೊದಲು ಆರೋಪಿಗಳು ಸಂತ್ರಸ್ತೆಗೆ ಪ್ರಜ್ಞೆ ತಪ್ಪುವ ಮಾದಕವಸ್ತು ತುಂಬಿದ ಪಾನೀಯವನ್ನು ಒತ್ತಾಯಪೂರ್ವಕವಾಗಿ ಕುಡಿಸಿದ್ದಾರೆ. ಬಳಿಕ ಒಬ್ಬೊಬ್ಬರಾಗಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದು ಆ ಬಾಲಕಿ ಗರ್ಭಿಣಿಯಾಗಲು ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳಿಂದ ದ್ವಿಚಕ್ರವಾಹನಗಳು ಸೇರಿದಂತೆ ಮೊಬೈಲ್, ವಾಹನಗಳು, ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೂನ್ 29 ರಂದು ಬಂಧಿತರಾಗಿರುವ ಎಲ್ಲಾ ಆರೋಪಿಗಳು ಅಪರಾಧ ಚಟುವಟಿಕೆಗಳು ಮತ್ತು ಮಾದಕ ದ್ರವ್ಯ ಸೇವನೆಯ ಹಿನ್ನೆಲೆಯನ್ನು ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪೈಶಾಚಿಕ ಕೃತ್ಯ ಎಸಗಿದ ಆರೋಪಿಗಳನ್ನು ಮರುದಿನ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಒಪ್ಪಿಸಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ