ಎಂಆರ್ ಪಿಎಲ್ ನ 4 ನೇ ಹಂತದ ನಿರ್ವಸಿತರ ಕುಟುಂಬಗಳ ಉದ್ಯೋಗ ಹಾಗೂ ಪುನರ್ವಸತಿ ಬೇಡಿಕೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ

 



ಮಂಗಳೂರು: ಎಂಆರ್ ಪಿಎಲ್  4ನೇ ಹಂತದ ಭೂ ನಿರ್ವಸಿತರಾಗುವ ಕುತ್ತೆತೂರು ಪೆರ್ಮುದೆ ಎಕ್ತಾರು ಗ್ರಾಮದ ನಿವಾಸಿಗಳಿಗೆ ಸಿಗಬೇಕಾದ ಪುನರ್ವಸತಿ ಹಾಗೂ ಉದ್ಯೋಗ ಮತ್ತಿತ್ತರ ಬೇಡಿಕೆಗಳ ಈಡೇರಿಸುವ ಕುರಿತಂತೆ ದ.ಕ ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ಸಭೆ ನಡೆಯಿತು.

ದ.ಕ ಜಿಲ್ಲಾ ಸಂಸದರು ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಸ್ಥಳೀಯ ಶಾಸಕರಾದ ಉಮಾನಾಥ ಕೋಟ್ಯಾನ್, ವಿಶೇಷ ಭೂಸ್ವಾದಿನಾಧಿಕಾರಿ, ಎಂಅಸರ್ ಪಿಎಲ್ ನ ಅಧಿಕಾರಿಗಳ ಮತ್ತು ಭೂ ನಿರ್ವಸಿತರ ಹಿತರಕ್ಷಣ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸ್ಥಳೀಯ ಶಾಸಕರು ಮತ್ತು ದ.ಕ ಜಿಲ್ಲಾ ಸಂಸದರು ಮಾತಾನಾಡಿ ಎಂಆರ್ ಪಿಎಲ್  ನ ವಿಸ್ತರಣೆಗಾಗಿ ಸ್ಥಳಿಯರು ಭೂಮಿಯನ್ನು ತ್ಯಾಗ ಮಾಡುತ್ತಿದ್ದು ಅವರಿಗೆ ದೊರಕಬೇಕಾದ `ಸವಲತ್ತುಗಳನ್ನು ಯಾವುದೇ ನಿಬಂದನೆಗಳಿಲ್ಲದೆ ಅಧಿಸೂಚನೆಗೆ ಮೊದಲು ಇದ್ದ ಎಲ್ಲಾ ಮನೆಗಳಿಗೆ ಸೂಕ್ತ ಪುನರ್ವಸತಿ ಮತ್ತು ಉದ್ಯೋಗವನ್ನು ವಿಳಂಬ ಮಾಡದೆ ಶೀಘ್ರವಾಗಿ ಕಲ್ಪಿಸುವ ಬಗ್ಗೆ ಸಭೆಯಲ್ಲಿ ಆಗ್ರಹಿಸಲಾಯಿತು,

ಸುಧೀರ್ಘ ನಡೆದ ಸಭೆಯಲ್ಲಿ ಕೊನೆಗೆ  ಜಿಲ್ಲಾಧಿಕಾರಿಗಳು ಮತ್ತು ಎಂಆರ್ ಪಿಎಲ್ ನ ಅಧಿಕಾರಿಗಳು ಎಲ್ಲಾ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿದರು.

ಇವರಿಂದ ಹರ್ಷಗೊಂಡ ಭೂ ನಿರ್ವಸಿತರ ಹಿತರಕ್ಷಣಾ ಸಮಿತಿ ಹಲವಾರು ವರ್ಷಗಳಿಂದ ಬಾಕಿ ಉಳಿದ್ದಿದ್ದ ಎಂಆರ್ ಪಿಎಲ್ ನ 4 ನೇ ಹಂತದ ಭೂಸ್ವಾದಿನತೆ ಬಗ್ಗೆ ಇದ್ದ ಉದ್ಯೋಗ ಹಾಗೂ ಪುನರ್‌ ವಸತಿಯ ಬೇಡಿಕೆಗೆ ಸ್ಪಂದಿಸಿದ  ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕ  ಉಮಾನಾಥ ಕೊಟ್ಯನ್ ಅವರಿಗೆ ಅದೇ ರೀತಿ ದ.ಕ.ಜಿಲ್ಲಾಧಿಕಾರಿ ಹಾಗೂ ಎಂಆರ್ ಪಿಎಲ್  ಅಧಿಕಾರಿಗಳಿಗೆ ಭೂ ನಿರ್ವಸಿತರ ಹಿತರಕ್ಷಣಾ ಸಮಿತಿಯ  ಪದಾಧಿಕಾರಿಗಳು ಹಾಗೂ ಗ್ರಾಮಸ್ತರು ಅಭಿನಂದನೆ ಸಲ್ಲಿಸಿದ್ದಾರೆ.