ಮಂಗಳೂರು: ದ.ಕ.ಜಿಲ್ಲೆಯ 5ತಾಲೂಕುಗಳ ಶಾಲೆ, ಪಿಯುಸಿಗಳಿಗೆ ನಾಳೆಯೂ ರಜೆ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಜು.19ರಂದು ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ರಜೆಯನ್ನು ಘೋಷಿಸಿದ್ದಾರೆ.

ಆದರೆ ಮಂಗಳೂರು, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ತಾಲೂಕುಗಳ ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ನೀಡಲಾಗಿಲ್ಲ. ಆದ್ದರಿ ಇಲ್ಲಿನ ಶಾಲಾ ಕಾಲೇಜುಗಳಿಗೆ ಎಂದಿನಂತೆ ತರಗತಿಗಳು ನಡೆಯಲಿದೆ ಎಂದು ಡಿಸಿಯವರು ಸ್ಪಷ್ಟವಾಗಿ ತಿಳಿಸಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu