ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಶಂಕಿತ ಡೆಂಗ್ಯುಗೆ ಮೊದಲ ಬಲಿ


ಮಂಗಳೂರು: ಶಂಕಿತ ಡೆಂಗ್ಯುಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಶಂಭೂರು ಮೂಲದ ಪುತ್ತೂರು ತಾಲೂಕಿನ ಪಡ್ನೂರು ನಿವಾಸಿ ಯತೀಶ್(50) ಮೃತಪಟ್ಟ ವ್ಯಕ್ತಿ.

ಜು.10ರಂದು ಯತೀಶ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು‌. ವಿಪರೀತ ಜ್ವರದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗೆಂದು ಸರಕಾರಿ ಆಸ್ಪತ್ರೆಗೆ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯತೀಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.