ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ
ಮೂಡಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಕೆನಡಾದ ಖ್ಯಾತ ಹೋಮಿಯೋಪತಿ ವೈದ್ಯರು ಹಾಗೂ ಕೆಐಐಎ ಮತ್ತು ಕೆಎಐಎ ಸಂಸ್ಥೆಗಳ ಸಂಸ್ಥಾಪಕರಾದ ಡಾ. ವಲರ್ಮತಿ ರೇಶೆಲ್ ಫರ್ನಾಂಡಿಸ್ ಭಾಗವಹಿಸಿದ್ದರು.
ಅವರು ಮಾತನಾಡಿ, ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಉನ್ನತ ವ್ಯಾಸಂಗ ಹಾಗೂ ವೈದ್ಯಕೀಯ ಸಂಶೋಧನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರಲಿ ಎಂದು ಹಾರೈಸಿದರು.
