ಕಡಬ: ದ.ಕ.ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ವಿಪರೀತ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಸದ್ಯ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಆನೆಯ ಕಳೇಬರ ನರೆ ನೀರಿಗೆ ತೇಲಿಬಂದಿರುವ ವೀಡಿಯೋ ವೈರಲ್ ಆಗಿದೆ.
ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದ್ದು, ಸೋಮವಾರ ತಡರಾತ್ರಿ ಒಂದು ಗಂಟೆಯ ಸುಮಾರಿಗೆ ಕುಮಾರಧಾರ ನದಿಯಲ್ಲಿ ನೀರು ಎಷ್ಟಿದೆ ಎಂದು ನೋಡಲು ಸ್ಥಳೀಯ ಮನ್ಮಥ ಬಟ್ಟೋಡಿ ಎಂಬವರು ತೆರಳಿದ್ದಾರೆ. ಅವರು ಆನೆಯ ಕಳೇಬರ ನೀರಿನಲ್ಲಿ ತೇಲುತ್ತಿರುವುದು ಕಂಡಿದ್ದಾರೆ. ತಕ್ಷಣ ಅವರು ಇದರ ದೃಶ್ಯವನ್ನು ಸೆರೆಹಿಡಿದಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋ ವೈರಲ್ ಆಗಿದೆ.