ಬಂಟ್ವಾಳ: ಲಾರಿಯಲ್ಲಿ ಸಾಗಿಸುತ್ತಿದ್ದ ಸಿಎನ್‌ಜಿ ಸಿಲಿಂಡರ್‌ನಿಂದ ಗ್ಯಾಸ್ ಲೀಕ್
Sunday, July 21, 2024
ಬಂಟ್ವಾಳ: ಲಾರಿಯಲ್ಲಿ ಸಾಗಿಸುತ್ತಿದ್ದ ಸಿಎನ್‌ಜಿ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿರುವ ಘಟನೆ ಬಿ.ಸಿ.ರೋಡ್ - ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಹಂಚಿಕಟ್ಟೆಯಲ್ಲಿ ನಡೆದಿದೆ.
ಗೇಲ್ ಕಂಪೆನಿಯ ಸಿಎನ್‌ಜಿ ಗ್ಯಾಸ್ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸಿಲಿಂಡರ್‌ನಿಂದ ಗ್ಯಾಸ್ ಸೊರಿಕೆಯಾಗಿತ್ತು. ವಿಚಾರ ಗಮನಕ್ಕೆ ಬಂದ ತಕ್ಷಣ ಲಾರಿಯನ್ನು ಚಾಲಕ ಹೆದ್ದಾರಿ ಬದಿಗೆ ನಿಲ್ಲಿಸಿ, ಬಟ್ಟೆಯಲ್ಲಿ ಮುಚ್ಚಿ ಸೋರಿಕೆ ತಡೆಯಲು ಯತ್ನಿಸಿದ್ದಾರೆ. ತಕ್ಷಣ ಬಂಟ್ವಾಳ ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿದೆ. ಆದರೆ ಅದಾಗಲೇ ಚಾಲಕ ಹಾಗೂ ಸ್ಥಳೀಯರು ಸೇರಿ ಸೋರಿಕೆಯನ್ನು ತಡೆದಿದ್ದಾರೆ ಎಂದು ತಿಳಿದು ಬಂದಿದೆ.