ಬೆಂಗಳೂರು: ಸುದ್ದಿಗೋಷ್ಠಿ ನಡೆಸುತ್ತಿದ್ದಾಗಲೇ ಹೆಚ್‌ಡಿ‌ಕೆ ಮೂಗಿನಿಂದ ರಕ್ತಸ್ರಾವ - ಅಪೊಲೊ ಆಸ್ಪತ್ರೆಗೆ ದಾಖಲು

ಬೆಂಗಳೂರು: ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದಾಗಲೇ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರ ಮೂಗಿನಿಂದ ರಕ್ತಸ್ರಾವವಾದ ಘಟನೆ ನಡೆದಿದೆ.

ಮುಡಾ ವಿಚಾರ ಕುರಿತಾಗಿ ಮೈಸೂರಿಗೆ ಪಾದಯಾತ್ರೆ ಕೈಗೊಳ್ಳುವ ಸಂಬಂಧ ರೂಪರೇಷೆಗಳ ಬಗ್ಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ರವಿವಾರ ಮೈತ್ರಿ ನಾಯಕರ ಸಭೆ ನಡೆಸಲಾಗಿತ್ತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಏಕಾಏಕಿ ಮೂಗಿನಿಂದ ರಕ್ತಸ್ರಾವವಾಗಿದೆ. ಬಳಿಕ ಸುದ್ದಿಗೋಷ್ಠಿಯನ್ನು ಮೊಟಕುಗೊಳಿಸಿದ ಕುಮಾರಸ್ವಾಮಿಯವರನ್ನು ನಗರದ ಅಪೊಲೊ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.