ಮಂಗಳೂರು: ನಾಳೆ ದ.ಕ.ಜಿಲ್ಲೆಯ ಶಾಲೆ ಪಿಯು ಕಾಲೇಜಿಗೆ ರಜೆ
Tuesday, July 30, 2024
ಮಂಗಳೂರು: ದ.ಕ. ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜು.31ರಂದು ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ನಾಳೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಲಾ - ಕಾಲೇಜಿಗೆ ರಜೆ ಘೋಷಿಸಲಾಗಿದೆ.
ದುರ್ಬಲ, ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ, ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸಬೇಕು ಎಂದು ಸೂಚಿಸಲಾಗಿದೆ.