MYSORE: ಡೆಂಗ್ಯೂಗೆ 35 ವರ್ಷದ ಆರೋಗ್ಯಾಧಿಕಾರಿ ಸಾವು


ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಸಮುದಾಯ ಆರೋಗ್ಯಾಧಿಕಾರಿಯೊಬ್ಬರು ಡೆಂಗ್ಯೂಗೆ ಸಾವನ್ನಪ್ಪಿದ್ದಾರೆ. 35 ವರ್ಷದ ನಾಗೇಂದ್ರ ಮೃತರು.


 ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ. ಇವರು ಹುಣಸೂರು ತಾಲೂಕಿನ ಗುರುಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇದರ ನಡುವೆ ಹುಣಸೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ  ಸೋಮವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಇವರು ಡೆಂಗ್ಯೂ ಸೋಂಕಿನಿಂದ ಬಳಲುತ್ತಿದ್ದರು.

BREAKING NEWS
Loading latest news...
Join our WhatsApp Channel Powered By : Online Pudu