-->
1000938341
ಮಂಗಳೂರು: ಭಾರಿ ಮಳೆ ಸುರಿಯುತ್ತಿರುವ - ಹಿನ್ನೆಲೆ ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ

ಮಂಗಳೂರು: ಭಾರಿ ಮಳೆ ಸುರಿಯುತ್ತಿರುವ - ಹಿನ್ನೆಲೆ ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ

ಮಂಗಳೂರು: ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. 
ದ.ಕ. ಜಿಲ್ಲೆಯಲ್ಲಿ ನಿನ್ನೆಯಿಂದ ವ್ಯಾಪಕ ಮಳೆಯಾಗುತ್ತಿದೆ. ಅದರಲ್ಲೂ ಬೆಳ್ತಂಗಡಿ ಮತ್ತು ಬಂಟ್ವಾಳದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಆದ್ದರಿಂದ ಈ ಎರಡು ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ತೋಡು, ಹಳ್ಳ ಕೈಸೇತುವೆಗಳನ್ನು ದಾಟಿ ಹಲವಾರು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪೋಷಕರು ಮಕ್ಕಳನ್ನು ನೀರಿಗೆ ಇಳಿಯದಂತೆ, ನೀರಲ್ಲಿ ಆಟವಾಡದಂತೆ ಜಾಗ್ರತೆ ವಹಿಸಬೇಕೆಂದು ಬೆಳ್ತಂಗಡಿ ತಹಶೀಲ್ದಾರ್ ಮತ್ತು ಬಿ.ಇ.ಒ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article