ಬೆಂಗಳೂರು: ನೇಣಿಗೆ ಶರಣಾದ ಮಹಿಳಾ ಟೆಕ್ಕಿ



ಬೆಂಗಳೂರು: ಫ್ಯಾನಿಗೆ ನೇಣು ಹಾಕಿಕೊಂಡು ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಗಂಗಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ಬಿಗೆರೆ ಲಕ್ಷ್ಮಯ್ಯ ಲೇಔಟ್‌ನಲ್ಲಿ ವರದಿಯಾಗಿದೆ.

ಪೂಜಾ(26) ಎಂಬವರು ಆತಹತ್ಯೆ ಮಾಡಿಕೊಂಡ ಟೆಕ್ಕಿ.

ಪೂಜಾ ಅವರು ಒಂದು ವರ್ಷದ ಹಿಂದೆ ಸುನೀಲ್ ಎಂಬಾತನನ್ನು ವಿವಾಹವಾಗಿದ್ದು, ಇಬ್ಬರು ನಗರದ ಖಾಸಗಿ ಕಂಪೆನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಜು.4ರಂದು ರಾತ್ರಿ ಮನೆಯಲ್ಲಿ ಯಾರೂ ಇಲ್ಲದಿದ್ದ ವೇಳೆ ಪೂಜಾ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ, ಮೃತ ಪೂಜಾರ ತಾಯಿ ವರದಕ್ಷಿಣೆ ಕಿರುಕುಳದಿಂದ ಮನನೊಂದು ತನ್ನ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ಗಂಗಮನಗುಡಿ ಪೊಲೀಸ್‌ ಠಾಣೆಗೆ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನೆ ಮಾಹಿತಿ ತಿಳಿದ ಕೂಡಲೇ ನಗರದ ಗಂಗಮನಗುಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu