ರಾಮನಗರಕ್ಕೆ ಬೆಂಗಳೂರು ದಕ್ಷಿಣ ನಾಮಕರಣ- ಡಿಕೆಶಿಗೆ ರಿಯಲ್ ಎಸ್ಟೇಟ್ ಆಸಕ್ತಿ: ವಿಜಯೇಂದ್ರ ಆರೋಪ -VIDEO

Photo Courtesy - ANI


ಬೆಂಗಳೂರು : ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, 'ಈಗಿನ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ. ಈಗ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡುತ್ತಿದ್ದಾರೆ. ದೇವರೇ ಬಲ್ಲ.  ಈ ನಿರ್ಧಾರದ ಹಿಂದೆ ಡಿಕೆ ಶಿವಕುಮಾರ್ ಅವರಿಗೆ ರಿಯಲ್ ಎಸ್ಟೇಟ್ ಬಗ್ಗೆ ಆಸಕ್ತಿ ಇದೆ ಎಂಬುದು ಇಡೀ ಕರ್ನಾಟಕಕ್ಕೆ ತಿಳಿದಿದೆ ಎಂದು ಆರೋಪಿಸಿದ್ದಾರೆ.