19 VTU Rank: ಸಹ್ಯಾದ್ರಿ ಕಾಲೇಜ್ ಸಾಧನೆ
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಈ ಬಾರಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ ಆಯೋಜಿಸಿದ ಪರೀಕ್ಷೆಯಲ್ಲಿ 19 Rankಗಳನ್ನು ತನ್ನದಾಗಿಸಿಕೊಂಡಿದೆ.
ರಾಜ್ಯ ಮಟ್ಟದಲ್ಲಿ ಶಿಕ್ಷಣ ಸಂಸ್ಥೆಯೊಂದು ಪಡೆದ ಗರಿಷ್ಠ ಶ್ರೇಣಿ ಇದಾಗಿದೆ ಎಂದು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಪ್ರಕಟಿಸಿದೆ.
ಶಿಕ್ಷಣ ಸಂಸ್ಥೆಯ ಸಾಧನೆಗೆ ಆಡಳಿತ ಮತ್ತು ಸಿಬ್ಬಂದಿ ವರ್ಗ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
